ಬೆಂಗಳೂರು ಸೇರಿ 25 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ; ನಾಳೆ ದಕ್ಷಿಣ ಕನ್ನಡಕ್ಕೆ ವರುಣನ ಆಗಮನ

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ತಾಪದಿಂದ ಬೆಂದಿದ್ದ ಜನತೆಗೆ ವರುಣ ತಂಪು ನೀಡುತ್ತಿದ್ದಾನೆ. ಕರ್ನಾಟಕದಾದ್ಯಂತ ಮುಂಗಾರು ಪೂರ್ವ ಚಟುವಟಿಕೆಗಳು ಚುರುಕುಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ (IMD) ಮುಂದಿನ ಐದು ದಿನಗಳ ಕಾಲ ರಾಜ್ಯದ 25 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.

ಕಳೆದ 32 ಗಂಟೆಗಳಲ್ಲಿ ಹಾಸನದಲ್ಲಿ ಗರಿಷ್ಠ 61.5 ಮಿ.ಮೀ ಮಳೆ ದಾಖಲಾಗಿದೆ. ಯಾದಗಿರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲೂ ಉತ್ತಮ ಮಳೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆ ಮುಂದುವರಿಯಲಿದ್ದು, ನಗರಕ್ಕೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ.

Advertisement

ಬೆಳಗಾವಿ, ಧಾರವಾಡ, ಹಾವೇರಿ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ರಾತ್ರಿಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ.

ಇದನ್ನೂ ಓದಿ: ಬೆಂಗಳೂರು ಮಳೆಗೆ ಕಾಂಪೌಂಡ್ ಕುಸಿದು 7 ಬಲಿ; ಸಿಎಂ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ!

Advertisement

ಹವಾಮಾನ ಇಲಾಖೆಯ ಮುನ್ಸೂಚನೆ:

ಏಪ್ರಿಲ್ 29: ಬೀದರ್, ಕಲಬುರಗಿ, ವಿಜಯಪುರ ಸೇರಿದಂತೆ 25 ಜಿಲ್ಲೆಗಳಲ್ಲಿ ಮಧ್ಯಮ ಮಳೆ.

ಏಪ್ರಿಲ್ 30: ಬಾಗಲಕೋಟೆ, ಉಡುಪಿ ಮತ್ತು ದಕ್ಷಿಣ ಕನ್ನಡ ಸೇರಿದಂತೆ 24 ಜಿಲ್ಲೆಗಳಲ್ಲಿ ಮಳೆ ಮುಂದುವರಿಕೆ.

ಮೇ 01: ಮೈಸೂರು, ಮಂಡ್ಯ, ದಾವಣಗೆರೆ ಸೇರಿದಂತೆ 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.

ಕ್ರೈಮ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು