ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ; ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಬೆಂಗಳೂರು: ರಾಜ್ಯದಲ್ಲಿ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳನ್ನು ನಡೆಸಲು ಕೊನೆಗೂ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಮಂಗಳವಾರ (ಅಕ್ಟೋಬರ್ 06) ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ವಿಸ್ತೃತ ಚರ್ಚೆ ನಡೆದಿದ್ದು, ಮುಂಬರುವ ಜನವರಿ ಮೊದಲ ವಾರದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸಂಪುಟ ಸಭೆ ಒಲವು ತೋರಿದೆ.

ಸಂಪುಟ ಸಭೆಯ ಪ್ರಮುಖ ನಿರ್ಧಾರಗಳು:

ಜನವರಿ 1ನೇ ವಾರದಲ್ಲಿ ಜಿ.ಪಂ & ತಾ.ಪಂ ಎಲೆಕ್ಷನ್: ಸಚಿವ ಸಂಪುಟ ಸಭೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಕುರಿತು ಸುದೀರ್ಘ ಚರ್ಚೆ ನಡೆದಿದ್ದು, ಜನವರಿ ಮೊದಲ ವಾರದಲ್ಲೇ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳನ್ನು ಪೂರ್ಣಗೊಳಿಸಲು ಸರ್ಕಾರ ತೀರ್ಮಾನಿಸಿದೆ.

ಬಳಿಕ ಗ್ರಾಮ ಪಂಚಾಯತಿ ಚುನಾವಣೆ: ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳ ಪ್ರಕ್ರಿಯೆ ಯಶಸ್ವಿಯಾಗಿ ಮುಗಿದ ನಂತರವೇ ಮುಂದಿನ ಹಂತದಲ್ಲಿ ಗ್ರಾಮ ಪಂಚಾಯತಿ ಚುನಾವಣೆಗಳನ್ನು ನಡೆಸಲು ಸರ್ಕಾರ ಯೋಜನೆ ರೂಪಿಸಿದೆ.

ಇದನ್ನೂ ಓದಿ: ದೇಶದ 4 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ 6 ಕ್ಷೇತ್ರಗಳಲ್ಲಿ ಉಪಚುನಾವಣೆ ಮತದಾನ: ತಮಿಳುನಾಡಿನಲ್ಲಿ ವಿಜಯ್, ಬೆಂಗಾಲ್‌ನಲ್ಲಿ ಸುವೇಂಧುಗೆ ಆಗ್ನಿಪರೀಕ್ಷೆ

ಸ್ಥಳೀಯ ನಾಯಕತ್ವಕ್ಕೆ ಹೊಸ ಚೈತನ್ಯ: ಕಳೆದ ಹಲವು ವರ್ಷಗಳಿಂದ ಚುನಾವಣೆ ನಡೆಯದೆ ಗ್ರಾಮೀಣ ಭಾಗದಲ್ಲಿ ಆಡಳಿತಾಧಿಕಾರಿಗಳ ಆಡಳಿತವಿತ್ತು. ಸರ್ಕಾರದ ಈ ನಿರ್ಧಾರದಿಂದಾಗಿ ಸ್ಥಳೀಯ ಮಟ್ಟದಲ್ಲಿ ರಾಜಕೀಯ ಚಟುವಟಿಕೆಗಳು ಮತ್ತೆ ಚುರುಕುಗೊಳ್ಳಲಿವೆ.

ಸಂಪುಟದ ಈ ನಿರ್ಧಾರದಿಂದಾಗಿ ಗ್ರಾಮೀಣ ಭಾಗದ ಜನಪ್ರತಿನಿಧಿಗಳು ಹಾಗೂ ರಾಜಕೀಯ ಪಕ್ಷಗಳಲ್ಲಿ ಹೊಸ ಉತ್ಸಾಹ ಮೂಡಿದ್ದು, ರಾಜ್ಯ ಚುನಾವಣಾ ಆಯೋಗವು ಶೀಘ್ರದಲ್ಲೇ ವೇಳಾಪಟ್ಟಿ ಸಿದ್ಧಪಡಿಸುವ ಸಾಧ್ಯತೆಯಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Leave a Reply

Your email address will not be published. Required fields are marked *