ಕಾರವಾರ: ಹಳೆಯ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನನ್ನು ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ್ದ 1993ರ ಹಳೆಯ ಪ್ರಕರಣದ ಆರೋಪಿಗೆ ಕಾರವಾರದ ನ್ಯಾಯಾಲಯವು ಶಿಕ್ಷೆ ಪ್ರಕಟಿಸಿದೆ. ಕಾರವಾರದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಿಗೆ 5 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 7,000 ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.
1993ರಲ್ಲಿ ಹಳೆಯ ದ್ವೇಷದ ಕಾರಣದಿಂದ ಆರೋಪಿಗಳು ಗುಂಪುಗೂಡಿ ಪ್ರಶಾಂತ್ ಎಂಬುವವರನ್ನು ದೊಣ್ಣೆಯಿಂದ ಹೊಡೆದು ಹತ್ಯೆ ಮಾಡಿದ್ದರು.ಅಂದಿನ ಕದ್ರಾ ವೃತ್ತದ ಸಿಪಿಐ ಡಿ.ಕೆ. ನಿಕ್ಕಮ್ ಅವರು ತನಿಖೆ ನಡೆಸಿ, ಭಗತವಾಡಾ ಅಸ್ನೋಟಿ ನಿವಾಸಿ ದೀಲಿಪ ಶಾಂತಾ ತಳೇಕರ ಎಂಬಾತನ ವಿರುದ್ಧ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.
ಇದನ್ನೂ ಓದಿ: Crime: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ದೈಹಿಕ ಶಿಕ್ಷಕನಿಗೆ ಶಿಕ್ಷೆ ಪ್ರಕಟ
ವಿಚಾರಣೆ ನಡೆಯುತ್ತಿದ್ದಾಗ ಆರೋಪಿ ದೀಲಿಪ ತಲೆಮರೆಸಿಕೊಂಡಿದ್ದರಿಂದ ಪ್ರಕರಣ ವಿಳಂಬವಾಗಿತ್ತು. ಏಪ್ರಿಲ್ 16, 2021 ರಂದು ಚಿತ್ತಾಕುಲ ಪಿಎಸ್‌ಐ ಪ್ರವೀಣ್ ಕುಮಾರ್ ನೇತೃತ್ವದ ತಂಡ ಆರೋಪಿಯನ್ನು ಪತ್ತೆಹಚ್ಚಿ ನ್ಯಾಯಾಲಯಕ್ಕೆ ಹಾಜರುಪಡಿಸಿತ್ತು.
ದೀರ್ಘಕಾಲದ ಕಾನೂನು ಹೋರಾಟದ ನಂತರ, ಈಗ ನ್ಯಾಯಾಲಯವು ಅಂತಿಮ ತೀರ್ಪು ನೀಡುವ ಮೂಲಕ ಸಂತ್ರಸ್ತನ ಕುಟುಂಬಕ್ಕೆ ನ್ಯಾಯ ಒದಗಿಸಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

