ಬದಿಯಡ್ಕ: ನಿಯಂತ್ರಣ ತಪ್ಪಿ 12 ಅಡಿ ಆಳದ ಹೊಂಡಕ್ಕೆ ಬಿದ್ದ ಓಮ್ನಿ ವ್ಯಾನ್! ಚಾಲಕ ಸತ್ಯನಾರಾಯಣ ಭಟ್ ಅಪಾಯದಿಂದ ಪಾರು

ಕಾಸರಗೋಡು: ಬದಿಯಡ್ಕ ಸಮೀಪದ ನವಕಾನ ಎಂಬಲ್ಲಿ ಗುರುವಾರ (ಮಾರ್ಚ್ 26) ಭೀಕರ ರಸ್ತೆ ಅಪಘಾತ ಸಂಭವಿಸಿದೆ. ನಿಯಂತ್ರಣ ತಪ್ಪಿದ ಓಮ್ನಿ ವ್ಯಾನ್ ರಸ್ತೆ ಬದಿಯ ಮರಕ್ಕೆ ಅಪ್ಪಳಿಸಿ, ಸುಮಾರು 12 ಅಡಿ ಆಳದ ಹೊಂಡಕ್ಕೆ ಬಿದ್ದಿದೆ.ದ್ಯಾಗಿರಿ ಬಜೆಯ ನಿವಾಸಿ ಸತ್ಯನಾರಾಯಣ ಭಟ್ (69) ಎಂಬುವವರು ಈ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ತಪಾಸಣೆಗಾಗಿ ಆಸ್ಪತ್ರೆಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ವ್ಯಾನ್ ಹೊಂಡಕ್ಕೆ ಬೀಳುತ್ತಿದ್ದಂತೆಯೇ ಸ್ಥಳೀಯರು ಕೂಡಲೇ ಕಾರ್ಯಪ್ರವೃತ್ತರಾಗಿ ಸತ್ಯನಾರಾಯಣ ಭಟ್ ಅವರನ್ನು ಮೇಲಕ್ಕೆತ್ತಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Advertisement

ಇದನ್ನೂ ಓದಿ: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಗೆ ಚಾಕಲೇಟ್ ನೀಡಿ ಪ್ರಪೋಸ್ ಮಾಡಿದ ಅಧ್ಯಾಪಕ! ಅಟ್ಟಾಡಿಸಿ ಹೊಡೆದ ವಿದ್ಯಾರ್ಥಿಗಳು

ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಜೆಸಿಬಿ ಯಂತ್ರವನ್ನು ಬಳಸಿ ಹೊಂಡದಲ್ಲಿ ಬಿದ್ದಿದ್ದ ವ್ಯಾನ್ ಅನ್ನು ಮೇಲಕ್ಕೆತ್ತಿದ್ದಾರೆ. ಮರಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ವ್ಯಾನ್ ಮುಂಭಾಗ ಜಖಂಗೊಂಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು