ಬೆಂಗಳೂರು: ರಾಜ್ಯದಲ್ಲಿ ಸಿಇಟಿ (KCET) ಪರೀಕ್ಷೆಯ ಸಂದರ್ಭದಲ್ಲಿ ಕಳೆದ ವರ್ಷದಂತೆ ಈ ವರ್ಷವೂ ‘ಜನಿವಾರ’ ವಿವಾದ ಮರುಕಳಿಸಿದೆ. ಬೆಂಗಳೂರಿನ ಮಡಿವಾಳದ ಕೃಪಾನಿಧಿ ಕಾಲೇಜಿನಲ್ಲಿ ಪರೀಕ್ಷೆ ಬರೆಯಲು ಬಂದಿದ್ದ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ನಡೆದಿದ್ದು, ಇದು ಈಗ ಸಾರ್ವಜನಿಕ ವಲಯದಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.
ಗುರುವಾರ (ಏಪ್ರಿಲ್ 23) ನಡೆದ ಪರೀಕ್ಷೆಯ ವೇಳೆ ಪರೀಕ್ಷಾ ಕೇಂದ್ರದ ಪ್ರವೇಶ ದ್ವಾರದಲ್ಲಿ ತಪಾಸಣೆ ನಡೆಸುತ್ತಿದ್ದ ಸಿಬ್ಬಂದಿ, ಸುಮಾರು ಐದಕ್ಕೂ ಹೆಚ್ಚು ವಿದ್ಯಾರ್ಥಿಗಳ ಜನಿವಾರವನ್ನು ತೆಗೆಯುವಂತೆ ಸೂಚಿಸಿದ್ದಾರೆ. “ಜನಿವಾರ ತೆಗೆದರೆ ಮಾತ್ರ ಪರೀಕ್ಷಾ ಕೊಠಡಿಯೊಳಗೆ ಪ್ರವೇಶ ನೀಡಲಾಗುವುದು, ಇಲ್ಲದಿದ್ದರೆ ಪರೀಕ್ಷಾ ಕೇಂದ್ರದಿಂದ ಹೊರಹೋಗಿ” ಎಂದು ಸಿಬ್ಬಂದಿ ಧಮಕಿ ಹಾಕಿದ್ದಾರೆ ಎಂದು ವಿದ್ಯಾರ್ಥಿಗಳು ಮತ್ತು ಪೋಷಕರು ಆರೋಪಿಸಿದ್ದಾರೆ.

ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಪೋಷಕರು ಮನಸ್ಸಿಲ್ಲದಿದ್ದರೂ ಜನಿವಾರವನ್ನು ತೆಗೆಸಿ ಮಕ್ಕಳನ್ನು ಪರೀಕ್ಷೆಗೆ ಕಳುಹಿಸಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆಯೇ ಪೋಷಕರು ಮತ್ತು ಧಾರ್ಮಿಕ ಮುಖಂಡರು ಕಾಲೇಜು ಆವರಣದಲ್ಲಿ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ: ಪುತ್ತೂರು: ಯುವತಿಗೆ ವಂಚಿಸಿದ ಪ್ರಕರಣ; ಮಾಜಿ ಬಿಜೆಪಿ ಮುಖಂಡನ ಪುತ್ರನಿಗೆ ಹೈಕೋರ್ಟ್‌ನಿಂದ ಬಿಗ್ ಶಾಕ್!


