ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಅತ್ಯಂತ ಕಾತರದಿಂದ ಕಾಯುತ್ತಿದ್ದ 2026ನೇ ಸಾಲಿನ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ (UGCET) ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಇಂದು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಫಲಿತಾಂಶದ ಬೆನ್ನಲ್ಲೇ ಇಂಜಿನಿಯರಿಂಗ್ ಹಾಗೂ ವೆಟರ್ನರಿ (ಪಶುಸಂಗೋಪನೆ) ವಿಭಾಗದ ಟಾಪರ್‌ಗಳ ಪಟ್ಟಿಯನ್ನು ಸಹ ಬಿಡುಗಡೆ ಮಾಡಲಾಗಿದ್ದು, ಎಂದಿನಂತೆ ಈ ಬಾರಿಯೂ ಹೆಣ್ಣುಮಕ್ಕಳೇ ಅಗ್ರಸ್ಥಾನ ಪಡೆದು ಐತಿಹಾಸಿಕ ಸಾಧನೆ ಮಾಡಿದ್ದಾರೆ.
ರಾಜ್ಯಾದ್ಯಂತ ತೀವ್ರ ಪೈಪೋಟಿ ಇದ್ದ ಇಂಜಿನಿಯರಿಂಗ್ ವಿಭಾಗದ ಫಲಿತಾಂಶದಲ್ಲಿ ಬೆಂಗಳೂರಿನ ವಿದ್ಯಾರ್ಥಿನಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಬೆಂಗಳೂರಿನ ಜಯನಗರದಲ್ಲಿರುವ ಪ್ರತಿಷ್ಠಿತ ಆರ್.ವಿ ಪಿಯು ಕಾಲೇಜಿನ ವಿದ್ಯಾರ್ಥಿನಿ ತನಿಷಾ ಕಾರ್ತಿಕ್ ಅವರು ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನ ಅಲಂಕರಿಸಿದ್ದಾರೆ. ಇನ್ನುಳಿದಂತೆ ಇದೇ ವಿಭಾಗದಲ್ಲಿ ಸೃಜನ್ ದ್ವಿತೀಯ ಸ್ಥಾನ ಪಡೆದರೆ, ನಿನಾದ್ ವಿಶಿಷ್ಟ ತೃತೀಯ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ.
ಇದನ್ನೂ ಓದಿ:ರಾಜ್ಯದ ಎಲ್ಲಾ ಶಾಲೆಗಳಲ್ಲಿ ದಿನಪತ್ರಿಕೆ ಓದುವುದು ಕಡ್ಡಾಯ; ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಹೊಸ ಸುತ್ತೋಲೆ!
ಇಲ್ಲಿದೆ ನೋಡಿ ವಿದ್ಯಾರ್ಥಿಗಳ ಪಟ್ಟಿ
| ವಿಭಾಗ (Stream) | ಪ್ರಥಮ ರ‍್ಯಾಂಕ್ (1st Rank) | ದ್ವಿತೀಯ ರ‍್ಯಾಂಕ್ (2nd Rank) | ತೃತೀಯ ರ‍್ಯಾಂಕ್ (3rd Rank) |
| ಇಂಜಿನಿಯರಿಂಗ್ | ತನಿಷಾ ಕಾರ್ತಿಕ್ (ಬೆಂಗಳೂರು) | ಸೃಜನ್ | ನಿನಾದ್ ವಿಶಿಷ್ಟ |
| ವೆಟರ್ನರಿ | ನಯನ ಗೋಪಿ (ಬೆಂಗಳೂರು) | ಅಮೂಲ್ಯ (ದಾವಣಗೆರೆ) | ರಿತಿಕ್ ಕುಮಾರ್ (ಬೆಂಗಳೂರು) |
ಪಶುಸಂಗೋಪನೆ ಅಂದರೆ ವೆಟರ್ನರಿ ವಿಭಾಗದಲ್ಲೂ ಬೆಂಗಳೂರಿನ ವಿದ್ಯಾರ್ಥಿನಿಯೇ ಪ್ರಥಮ ಸ್ಥಾನವನ್ನು ಮುಡಿಗೇರಿಸಿಕೊಂಡಿದ್ದಾರೆ. ಬೆಂಗಳೂರಿನ ಶಿವನಗರದ ಪಿಯು ಕಾಲೇಜಿನ ವಿದ್ಯಾರ್ಥಿನಿ ನಯನ ಗೋಪಿ ಅವರು ವೆಟರ್ನರಿ ವಿಭಾಗದಲ್ಲಿ ಇಡೀ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆಯುವ ಮೂಲಕ ಅದ್ಭುತ ಸಾಧನೆ ಮಾಡಿದ್ದಾರೆ. ಈ ವಿಭಾಗದಲ್ಲಿ ದ್ವಿತೀಯ ರ‍್ಯಾಂಕ್ ಅನ್ನು ದಾವಣಗೆರೆಯ ಸರ್ ಎಂ.ವಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಅಮೂಲ್ಯ ಪಡೆದುಕೊಂಡರೆ, ಆರ್.ವಿ ಪಿಯು ಕಾಲೇಜಿನ ರಿತಿಕ್ ಕುಮಾರ್ ತೃತೀಯ ರ‍್ಯಾಂಕ್ ಪಡೆದಿದ್ದಾರೆ.
ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


