Breaking News

ಗದಗ ಬಸ್ ನಿಲ್ದಾಣದಲ್ಲಿ ಭೀಕರ ಅಪಘಾತ: ಮೂವರು ಮಹಿಳೆಯರ ಮೇಲೆ ಹರಿದ ಕೆಕೆಆರ್‌ಟಿಸಿ ಬಸ್

ಗದಗ: ನಗರದ ಹೊಸ ಬಸ್ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (KKRTC) ಬಸ್ ಅತಿವೇಗವಾಗಿ ಚಲಿಸಿ ಮೂವರು ಮಹಿಳೆಯರ ಮೇಲೆ ಹರಿದಿದೆ. ಈ ಘಟನೆಯಲ್ಲಿ ಮಹಿಳೆಯೊಬ್ಬರ ಕಾಲು ತುಂಡಾಗಿದ್ದು, ಉಳಿದ ಇಬ್ಬರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ರಾಯಚೂರು ಜಿಲ್ಲೆಯ ಮಾಸ್ಕಿ ಡಿಪೋಗೆ ಸೇರಿದ ಕೆಕೆಆರ್‌ಟಿಸಿ ಬಸ್ (KA-36-F-2018) ಈ ಅಪಘಾತಕ್ಕೆ ಕಾರಣವಾಗಿದೆ. ಬಸ್ ನಿಲ್ದಾಣದ ಒಳಗೆ ಪ್ರವೇಶಿಸುವಾಗ ಚಾಲಕ ಅತಿವೇಗವಾಗಿ ಚಾಲನೆ ಮಾಡಿದ್ದರಿಂದ ಈ ದುರಂತ ಸಂಭವಿಸಿದೆ ಎನ್ನಲಾಗಿದೆ.

ಬಸ್ ಹತ್ತಲು ಕಾಯುತ್ತಿದ್ದ ಮೂವರು ಮಹಿಳೆಯರ ಮೇಲೆ ಬಸ್ ಹರಿದಿದೆ. ಈ ಪೈಕಿ ಶಾಂತವ್ವ ಸಿದ್ದಪ್ಪ ಕೊರ್ತಿ ಎಂಬುವವರ ಕಾಲು ಸಂಪೂರ್ಣವಾಗಿ ಜಜ್ಜಲ್ಪಟ್ಟು ತೀವ್ರ ರಕ್ತಸ್ರಾವವಾಗಿದೆ. ಅವರನ್ನು ಕೂಡಲೇ ಜಿಲ್ಲಾಸ್ಪತ್ರೆಗೆ (GIMS) ದಾಖಲಿಸಲಾಗಿದೆ. ಬಸ್ ನಿಲ್ದಾಣದಂತಹ ಜನನಿಬಿಡ ಪ್ರದೇಶದಲ್ಲಿ ಚಾಲಕ ನಿಯಂತ್ರಣ ತಪ್ಪಿ ವೇಗವಾಗಿ ಬಂದಿರುವುದೇ ಈ ಅಪಘಾತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ದೂರಿದ್ದಾರೆ.

Advertisement

ಇದನ್ನೂ ಓದಿ: ಶಿವಮೊಗ್ಗ: ಸ್ಪೆಷಲ್ ಕ್ಲಾಸ್ ಬಳಿಕ ಸಹಪಾಠಿಯ ಭೀಕರ ಕೊಲೆ; ಅನ್ಯಕೋಮಿನ ಮೂವರು ವಿದ್ಯಾರ್ಥಿಗಳ ಬಂಧನ!

ಇಲ್ಲಿದೆ ನೋಡಿ ವಿಡಿಯೋ:


ಘಟನೆ ನಡೆದ ತಕ್ಷಣವೇ ಸ್ಥಳಕ್ಕೆ ಧಾವಿಸಿದ ಗದಗ ಟ್ರಾಫಿಕ್ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಬಸ್ ಚಾಲಕನ ವಿರುದ್ಧ ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಯ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. ಬಸ್‌ನ ಬ್ರೇಕ್ ಫೇಲ್ ಆಗಿತ್ತೇ ಅಥವಾ ಚಾಲಕನ ಸಂಪೂರ್ಣ ನಿರ್ಲಕ್ಷ್ಯವೇ ಎಂಬುದರ ಬಗ್ಗೆ ತನಿಖೆ ಮುಂದುವರಿದಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು