Breaking News

ಕೊಡಗು: ಗಾಂಜಾ ಸೇವನೆ, ಯುವತಿ ಸೇರಿ ಐವರ ಬಂಧನ

ಕೊಡಗು: ಗಾಂಜಾ ಸೇವನೆ ಮಾಡುತ್ತಿದ್ದ ಆರೋಪದ ಅಡಿಯಲ್ಲಿ ಇಬ್ಬರು ಯುವತಿಯರು ಸೇರಿ ಐವರನ್ನು ಬಂಧಿಸಲಾಗಿದೆ. ಕೊಡಗು ಜಿಲ್ಲೆ ಸಿದ್ದಾಪುರ ಸಮೀಪ ನೆಲ್ಲಿಹುದಿಕೇರಿ ಗ್ರಾಮದ ಬೆಟ್ಟದಕಾಡು ರಸ್ತೆಯಲ್ಲಿ ಗಾಂಜಾ ಸೇವನೆ ಮಾಡುತ್ತಿರುವ ಕುರಿತು ಖಚಿತ ಸುಳಿವಿನ ಮೇರೆಗೆ ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ನೇತೃತ್ವದಲ್ಲಿ ಸಿಬ್ಬಂದಿ ದಾಳಿ ನಡೆಸಿ 2 ಮಹಿಳೆ ಸೇರಿ ಐದು ಮಂದಿಯನ್ನು ಬಂಧಿಸಿದ್ದಾರೆ.

ಅಪ್ಪಲ್(29), ಭವಿತಾ (22), ಗಿರಿಜಾ (20), ಶಿವು (26) ನಿಖಿಲ್ (25) ಬಂಧಿತ ಆರೋಪಿಗಳು.

Advertisement

ಬಂಧಿತರು ಸಿದ್ದಾಪುರ ಹಾಗೂ ನೆಲ್ಲಿಹುದಿಕೇರಿ ಗ್ರಾಮದ ನಿವಾಸಿಗಳೆಂದು ತಿಳಿದು ಬಂದಿದೆ. ಕಾರ್ಯಾಚರಣೆಯಲ್ಲಿ ಸಿದ್ದಾಪುರದ ಅಪರಾಧ ಪತ್ತೆ ದಳದ ಸಿಬ್ಬಂದಿಗಳಾದ ಮಣಿಕಂಠ, ಪ್ರಸನ್ನ, ಅಭಿ ಪಾಲ್ಗೊಂಡಿದ್ದರು. ಆರೋಪಿಗಳ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

 

ಇದನ್ನು ಓದಿ: ಚಿನ್ನ ಮರಳಿಸಿ ಪ್ರಾಮಾಣಿಕತೆ ಮೆರೆದ ಮಹಿಳೆಗೆ ಮುಖ್ಯಮಂತ್ರಿಯವರಿಂದ ಸನ್ಮಾನ

News Source : G1 News

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು