ಬೆಂಗಳೂರು: ಮಹಾಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಿಂದ ಲಕ್ಷಾಂತರ ಜನರು ತಮ್ಮ ಸ್ವಗ್ರಾಮಗಳತ್ತ ಮುಖ ಮಾಡಿದ್ದಾರೆ. ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ ಸಾರಿಗೆ ಇಲಾಖೆಯು ಬರೋಬ್ಬರಿ 2,155 ಹೆಚ್ಚುವರಿ ಬಸ್‌ಗಳ ವ್ಯವಸ್ಥೆಯನ್ನು ಘೋಷಿಸಿದೆ.
ಹಬ್ಬದ ಸರಣಿ ರಜೆಗಳ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿಯಿಂದಲೇ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ತೆರಳುವವರ ಸಂಖ್ಯೆ ಹೆಚ್ಚಾಗಿದೆ. ಇದನ್ನು ಮನಗಂಡು ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳು ಜಂಟಿಯಾಗಿ ಹೆಚ್ಚುವರಿ ಬಸ್ಸುಗಳನ್ನು ಬಿಟ್ಟಿದೆ.

ಇದನ್ನೂ ಓದಿ: ಬೆಳ್ತಂಗಡಿ: ಕೆಎಎಫ್ ಕ್ರಿಯೇಟಿವ್ ಶಾಪ್‌ನಲ್ಲಿ ಗ್ಯಾಸ್ ಸೋರಿಕೆ; ತಪ್ಪಿದ ಭಾರಿ ಅನಾಹುತ!
ನಿನ್ನೆ 895 ಹೆಚ್ಚುವರಿ ಬಸ್‌ಗಳು ರಸ್ತೆಗೆ ಇಳಿದಿದೆ. ಇಂದು 1,180 ಹೆಚ್ಚುವರಿ ಬಸ್‌ಗಳು, ಹಾಗೂ ಭಾನುವಾರ 80 ಹೆಚ್ಚುವರಿ ಬಸ್‌ಗಳನ್ನು ಬಿಡಲಾಗುವುದು. ಮೆಜೆಸ್ಟಿಕ್ ಕೆಂಪೇಗೌಡ ಬಸ್ ನಿಲ್ದಾಣದಿಂದ ಉತ್ತರ ಕರ್ನಾಟಕ ಮತ್ತು ಕರಾವಳಿ ಭಾಗಕ್ಕೆ ತೆರಳುವ ಬಸ್‌ಗಳು ಇಲ್ಲಿಂದ ಲಭ್ಯವಿರಲಿದೆ. ಮೈಸೂರು ರಸ್ತೆ ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಮೈಸೂರು, ಮಡಿಕೇರಿ ಮತ್ತು ತಮಿಳುನಾಡು ಕಡೆಗೆ ಹೋಗುವವರಿಗೆ ವ್ಯವಸ್ಥೆ ಮಾಡಲಾಗಿದೆ.

ಇನ್ನು ನಿಲ್ದಾಣದಲ್ಲಿ ದಟ್ಟಣೆಯನ್ನು ತಪ್ಪಿಸಲು ಪ್ರಯಾಣಿಕರು ಕೆಎಸ್‌ಆರ್‌ಟಿಸಿ ಅಧಿಕೃತ ವೆಬ್‌ಸೈಟ್ ಅಥವಾ ಆ್ಯಪ್ ಮೂಲಕ ಮುಂಗಡ ಟಿಕೆಟ್ ಕಾಯ್ದಿರಿಸಲು ನಿಗಮ ಕೋರಿದೆ. ಹಬ್ಬ ಮುಗಿಸಿ ವಾಪಸ್ ಬರುವವರಿಗೂ ಸಹ ಇದೇ ರೀತಿ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಲಾಗುವುದು ಎಂದು ಸಾರಿಗೆ ಇಲಾಖೆ ತಿಳಿಸಿದೆ.
ಮಹಾಶಿವರಾತ್ರಿ ಹಬ್ಬಕ್ಕೆ ವಿಶೇಷ ರೈಲು:
ಇದೇ ರೀತಿ ನೈರುತ್ಯ ರೈಲ್ವೆ ಯಶವಂತಪುರ ಮತ್ತು ಕಲಬುರಗಿ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸಂಚಾರವನ್ನು ಘೋಷಿಸಿದೆ.
ಯಶವಂತಪುರದಿಂದ ರಾತ್ರಿ 22:40ಕ್ಕೆ ಹೊರಟು, ಮರುದಿನ ಬೆಳಗ್ಗೆ 09:15ಕ್ಕೆ ಕಲಬುರಗಿ ತಲುಪಲಿದೆ. ರೈಲು ಸಂಖ್ಯೆ 06210 ಇಂದು ಕಲಬುರಗಿಯಿಂದ ಬೆಳಗ್ಗೆ 10:15ಕ್ಕೆ ಹೊರಟು, ಅದೇ ದಿನ ರಾತ್ರಿ 21:40ಕ್ಕೆ ಯಶವಂತಪುರ ತಲುಪಲಿದೆ. ಯಲಹಂಕ, ಹಿಂದೂಪುರ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು, ಕೃಷ್ಣ, ಯಾದಗಿರಿ ಮತ್ತು ಶಹಾಬಾದ್ ಕೂಡ ವಿಶೇಷ ರೈಲುಗಳನ್ನು ಘೋಷಣೆ ಮಾಡಲಾಗಿದೆ. ಈ ವಿಶೇಷ ರೈಲು ಒಟ್ಟು 20 ಬೋಗಿಗಳನ್ನು ಒಳಗೊಂಡಿರುತ್ತದೆ.
ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್: 7353833811, ಇ-ಮೇಲ್- g1newsdpt@gmail.com

