ಬೆಂಗಳೂರು: ರಾಜ್ಯದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಿಹಿಸುದ್ದಿ ನೀಡಿದೆ.
ಫೆಬ್ರವರಿ 28ರಿಂದ ಪ್ರಾರಂಭವಾಗಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಸುಲಭವಾಗಿ ಮತ್ತು ಸಕಾಲಕ್ಕೆ ತಲುಪಲು ಪರೀಕ್ಷಾ ದಿನಗಳಂದು ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

ಇದನ್ನೂ ಓದಿ: T20 Worldcup: ಕೆನಡಾ ವಿರುದ್ಧ ಸುಲಭ ಜಯ ಸಾಧಿಸಿದ ಯುಎಇ
ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆಗಳು ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ನಡೆಯಲಿವೆ. ಈ ಅವಧಿಯಲ್ಲಿ ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಕೇಂದ್ರದವರೆಗೆ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಯಾವುದೇ ಟಿಕೆಟ್ ಇಲ್ಲದೆ ಪ್ರಯಾಣಿಸಬಹುದಾಗಿದೆ ಎಂದು ನಿಗಮವು ಅಧಿಕೃತ ಆದೇಶ ಹೊರಡಿಸಿದೆ.
ವಿದ್ಯಾರ್ಥಿಗಳು ಈ ಉಚಿತ ಸಾರಿಗೆ ಸೌಲಭ್ಯವನ್ನು ಪಡೆಯಲು ಬಸ್ ನಿರ್ವಾಹಕರಿಗೆ ತಮ್ಮ ಪರೀಕ್ಷಾ ಪ್ರವೇಶ ಪತ್ರ ತೋರಿಸುವುದು ಕಡ್ಡಾಯವಾಗಿದೆ ಎಂದು ನಿಗಮ ಹೇಳಿದೆ.
ಪರೀಕ್ಷಾ ಪ್ರವೇಶ ಪತ್ರವನ್ನೇ ಬಸ್ ಪಾಸ್ ಎಂದು ಪರಿಗಣಿಸುವಂತೆ ಕೆಎಸ್ಆರ್ಟಿಸಿ ತನ್ನ ಎಲ್ಲಾ ಘಟಕಗಳ ಚಾಲಕರು ಮತ್ತು ನಿರ್ವಾಹಕರಿಗೆ ಸೂಚನೆ ನೀಡಿದೆ. ಪರೀಕ್ಷೆ ಬರೆಯಲು ಹೋಗುವಾಗ ಹಾಗೂ ಪರೀಕ್ಷೆ ಮುಗಿಸಿ ಮನೆಗೆ ಹಿಂದಿರುಗುವಾಗಲೂ ಈ ಸೌಲಭ್ಯ ಅನ್ವಯವಾಗಲಿದೆ.
ಗ್ರಾಮೀಣ ಮತ್ತು ನಗರ ಪ್ರದೇಶದ ವಿದ್ಯಾರ್ಥಿಗಳು ಸಾರಿಗೆ ಸಮಸ್ಯೆಯಿಂದಾಗಿ ಪರೀಕ್ಷೆಗೆ ಗೈರಾಗಬಾರದು ಅಥವಾ ವಿಳಂಬವಾಗಬಾರದು ಎಂಬ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳಿರುವ ಮಾರ್ಗಗಳಲ್ಲಿ ಹೆಚ್ಚಿನ ಬಸ್ಗಳನ್ನು ಹಾಕಲಾಗುವುದು. ಇದರ ಜತೆಗೆ ವಿದ್ಯಾರ್ಥಿಗಳು ಕೈ ತೋರಿಸಿದ ಕಡೆ ಬಸ್ ನಿಲ್ಲಿಸಲು ಚಾಲಕರಿಗೆ ಸೂಚಿಸಲಾಗಿದೆ.
ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್: 7353833811, ಇ-ಮೇಲ್- g1newsdpt@gmail.com

