KSRTC : ಸಾರಿಗೆ ಬಸ್ ಗಳಲ್ಲಿ ಗುಡ್ಕ, ತಂಬಾಕು ಜಾಹೀರಾತುಗಳಿಗೆ ನಿರ್ಬಂಧ

ಬೆಂಗಳೂರು : ರಾಜ್ಯ ಸಾರಿಗೆ ಸಂಸ್ಥೆಯ ಬಸ್‌ಗಳ ಮೇಲೆ ಗುಟ್ಕಾ, ತಂಬಾಕು ಉತ್ಪನ್ನಗಳ ಜಾಹೀರಾತು ಹೆಚ್ಚಾಗಿರೋದಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ಕಾರಣ ಸಾರಿಗೆ ಸಚಿವರು ಕೆಎಸ್‌ಆರ್‌ಟಿಸಿ ಹಾಗೂ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಿಗೆ ಅಧಿಕೃತ ಸೂಚನಾ ಪತ್ರ ರವಾನಿಸಿದ್ದಾರೆ.’ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕೂಡಲೇ ಬಸ್ಸುಗಳಲ್ಲಿ ಮತ್ತು ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಉತ್ತೇಜಿಸುವ ನೇರ ಅಥವಾ ಪರೋಕ್ಷವಾದ ಯಾವುದೇ ಜಾಹೀರಾತುಗಳನ್ನು ಪ್ರಚಾರ ಮಾಡುವಂತಿಲ್ಲ ಎಂದು ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ : “ರಾಜ್ಯ ಸರ್ಕಾರದ ಸ್ಕ್ಯಾಮ್ ಸಾಮ್ರಾಜ್ಯದ ಅಸಲಿ ಕತೆ!”; ಬಿಜೆಪಿ ವಿರುದ್ಧ ದೂರು ದಾಖಲು

Advertisement

ಸಾರಿಗೆ ಸಂಸ್ಥೆಯು ಆದಾಯಕ್ಕಿಂತ ಜನರ ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಬೇಕೆಂದು, ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಸುವ ಲಕ್ಷಾಂತರ ಜನರಿಗೆ ತಪ್ಪು ಸಂದೇಶ ರವಾನೆಯಾಗುವುದನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.

ಕೇವಲ ಹೊಸ ಜಾಹೀರಾತುಗಳ ನಿಷೇಧ ಮಾತ್ರವಲ್ಲದೆ, ಈಗಾಗಲೇ ಬಸ್‌ಗಳ ಮೇಲೆ ಅಳವಡಿಸಲಾಗಿರುವ ಗುಟ್ಕಾ ಬ್ರಾಂಡ್‌ಗಳ ಚಿತ್ರಗಳನ್ನು ತಕ್ಷಣವೇ ತೆಗೆದುಹಾಕಲು ಸಚಿವರು ಆದೇಶಿಸಿದ್ದಾರೆ. ಜಾಹೀರಾತುಗಳನ್ನು ತೆರವುಗೊಳಿಸಲು ನಿರ್ದಿಷ್ಟ ಸಮಯವನ್ನು ನಿಗದಿಪಡಿಸುವಂತೆ ಮತ್ತು ಆ ಗಡುವಿನೊಳಗೆ ಎಲ್ಲಾ ಪ್ರಚಾರದ ಫಲಕಗಳನ್ನು ಕಿತ್ತೆಸೆಯುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

Advertisement

ರಾಜ್ಯದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

News Source : G1 News

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು