ಈಡೇರದ ಬೇಡಿಕೆಗಳು; ಮೇ ೨೦ ರಿಂದ ಕರ್ನಾಟಕ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕರ ಸಂಘಟನೆಗಳ ಸಂಯುಕ್ತ ಕ್ರಿಯಾ ಸಮಿತಿ (ಜೇಎಸಿ) ಮೇ 20ರಿಂದ ಅನಿರ್ದಿಷ್ಟಾವಧಿಯ ರಾಜ್ಯವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ. ಇದರಿಂದಾಗಿ ಆ ದಿನ ಬೆಳಿಗ್ಗೆ 6 ಗಂಟೆಯಿಂದ KSRTC, BMTC, NWKRTC ಹಾಗೂ KKRTC ಬಸ್ ಸೇವೆಗಳು ಸಂಪೂರ್ಣ ಸ್ಥಗಿತಗೊಳ್ಳುವ ಸಾಧ್ಯತೆ ಇದೆ.

ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರೊಂದಿಗೆ ನಡೆದ ಇತ್ತೀಚಿನ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

Advertisement

ನಿನ್ನೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜ್ಯೋತಿ ಅನಂತಸುಬ್ಬ ರಾವ್ ಅವರು, 2024ರ ಜನವರಿಯಿಂದ ಅನ್ವಯವಾಗುವಂತೆ 25% ವೇತನ ಹೆಚ್ಚಳವನ್ನು ಕಾರ್ಮಿಕ ಸಂಘಟನೆಗಳು ಬೇಡಿಕೆ ಇಟ್ಟಿರುವುದಾಗಿ ತಿಳಿಸಿದರು. ಆದರೆ ಸರ್ಕಾರವು 2025ರ ಏಪ್ರಿಲ್ 1ರಿಂದ 7% ಮಾತ್ರ ವೇತನ ಹೆಚ್ಚಳ ನೀಡುವುದಾಗಿ ಹೇಳಿರುವುದು ಕಾರ್ಮಿಕರಿಗೆ ಅಸ್ವೀಕಾರಾರ್ಹ ಎಂದು ಹೇಳಿದರು.

ಇದನ್ನೂ ಓದಿ: ಶೃಂಗೇರಿ ಮರು ಮತ ಎಣಿಕೆ ಲೆಕ್ಕಾಚಾರ ಉಲ್ಟಪಲ್ಟ: ಕಾಂಗ್ರೆಸ್ ಅಭ್ಯರ್ಥಿ ರಾಜೇಗೌಡಗೆ ಹಿನ್ನಡೆ, ಬಿಜೆಪಿ ಅಭ್ಯರ್ಥಿ ಜೀವರಾಜ್ ಮುನ್ನಡೆ

Advertisement

“ನಿಗದಿತ ಅವಧಿಯೊಳಗೆ ವೇತನ ಪರಿಷ್ಕರಣೆ ಜಾರಿಗೆ ತರಬೇಕೆಂದು ನಾವು ಮನವಿ ಮಾಡಿದ್ದೇವೆ. ಆದರೆ ಸರ್ಕಾರ ಸ್ಪಂದಿಸಿಲ್ಲ. ಈ ಕಾರಣದಿಂದ ಮುಷ್ಕರ ಅನಿವಾರ್ಯವಾಗಿದೆ,” ಎಂದು ಅವರು ಸ್ಪಷ್ಟಪಡಿಸಿದರು.

ಮುಷ್ಕರದಿಂದ ಸಾರ್ವಜನಿಕರಿಗೆ ಉಂಟಾಗುವ ಅಸೌಕರ್ಯಕ್ಕೆ ಸರ್ಕಾರವೇ ಹೊಣೆಗಾರಿಯಾಗಲಿದೆ ಎಂದು ಸಂಘಟನೆಗಳು ಎಚ್ಚರಿಕೆ ನೀಡಿವೆ. “ನಾವು ಹಲವು ಬಾರಿ ಸರ್ಕಾರವನ್ನು ಸಂಪರ್ಕಿಸಿದ್ದೇವೆ. ಆದರೆ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಸಾರ್ವಜನಿಕರಿಗೆ ತೊಂದರೆ ಉಂಟಾದರೆ ಅದರ ಹೊಣೆ ಸರ್ಕಾರದ ನಿರ್ಲಕ್ಷ್ಯವೇ ಹೊರತು ಕಾರ್ಮಿಕರಲ್ಲ,” ಎಂದು ಜೇಎಸಿ ಸದಸ್ಯರು ತಿಳಿಸಿದ್ದಾರೆ.

ಸಾರಿಗೆ ನೌಕರರ ಪ್ರಮುಖ ಬೇಡಿಕೆಗಳು:

26 ತಿಂಗಳ ಅವಧಿಗೆ ಸಂಬಂಧಿಸಿದ ₹1,272 ಕೋಟಿ ಬಾಕಿ ವೇತನವನ್ನು ಒಂದೇ ಕಂತಿನಲ್ಲಿ ಪಾವತಿಸುವುದು

ದಿನಸಿ ಭತ್ಯೆ ಸೇರಿದಂತೆ ಇತರ ಸೌಲಭ್ಯಗಳನ್ನು ತಕ್ಷಣ ಹೆಚ್ಚಿಸುವುದು

ಕೋವಿಡ್ ಅವಧಿಯಲ್ಲಿ ಮೃತಪಟ್ಟ ನೌಕರರ ಕುಟುಂಬಗಳಿಗೆ ಪರಿಹಾರವನ್ನು ಶೀಘ್ರ ಬಿಡುಗಡೆ ಮಾಡುವುದು

‘ಫಾರ್ಮ್-4’ ಸೇರಿದಂತೆ ಆಡಳಿತಾತ್ಮಕ ಸಮಸ್ಯೆಗಳನ್ನು ಒಂದು ತಿಂಗಳೊಳಗೆ ಜೇಎಸಿಯೊಂದಿಗೆ ಚರ್ಚಿಸಿ ಪರಿಹರಿಸುವುದು

ಒಟ್ಟಾರೆ, ಸರ್ಕಾರ ಮತ್ತು ಕಾರ್ಮಿಕರ ನಡುವಿನ ಭಿನ್ನಾಭಿಪ್ರಾಯ ಪರಿಹಾರವಾಗದಿದ್ದರೆ ಮೇ 20ರಿಂದ ರಾಜ್ಯದ ಸಾರಿಗೆ ವ್ಯವಸ್ಥೆ ಮೇಲೆ ದೊಡ್ಡ ಪರಿಣಾಮ ಬೀರುವ ಸಾಧ್ಯತೆ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು