Breaking News

ರಾಜ್ಯಾದ್ಯಂತ ಫೆ.19ಕ್ಕೆ ಕೆಎಸ್ಆರ್‌ಟಿಸಿ ಸೇರಿ 4 ನಿಗಮದ ಸಾರಿಗೆ ನೌಕರರ ಪ್ರತಿಭಟನೆ

ಬೆಂಗಳೂರು: ಸಾರಿಗೆ ನೌಕರರು ವಿವಿಧ ಬೇಡಿಕೆಗೆ ಒತ್ತಾಯಿಸಿ ಗುರುವಾರ ರಾಜ್ಯಾದ್ಯಂತ ಪ್ರತಿಭಟನೆಗೆ ಮುಂದಾಗಿದ್ದಾರೆ. ಬೆಂಗಳೂರು ಚಲೋಗೆ ಕೂಡ ಕರೆಕೊಟ್ಟಿದ್ದಾರೆ. ಹೀಗಾಗಿ, ಕೆಎಸ್‌ಆರ್‌ಟಿಸಿ ಬಸ್‌ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.

ಇತ್ತ ಸಾರಿಗೆ ನಿಗಮಗಳು ನೌಕರರು ರಜೆ ತೆಗೆದುಕೊಳ್ಳ ಬಾರದು ಎಂದು ಸೂಚನೆ ನೀಡಿದೆ. ಜತೆಗೆ ವೇತನ ಕಡಿತದ ಎಚ್ಚರಿಕೆಯನ್ನು ನೀಡಿದೆ.

Advertisement

ಇದನ್ನೂ ಓದಿ: ದಿನ ಭವಿಷ್ಯ: ಬುಧವಾರದ ರಾಶಿಫಲ; ಯಾರಿಗೆ ಲಾಭ? ಯಾರಿಗೆ ಎಚ್ಚರಿಕೆ ಅಗತ್ಯ?

ವೇತನ ಹೆಚ್ಚಳದ ಹಿಂಬಾಕಿ ಹಾಗೂ ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ನೌಕರರು ಗುರುವಾರ ‘ಬೆಂಗಳೂರು ಚಲೋ’ ನಡೆಸಲಿದ್ದಾರೆ.

ಈ ಹಿನ್ನೆಲೆ ರಾಜ್ಯಾದ್ಯಂತ ಬಸ್‌ ಸೇವೆ ವ್ಯತ್ಯಯವಾಗುವ ಸಾಧ್ಯತೆ ಇದೆ. ಸಾರಿಗೆ ನೌಕರರ ಸಂಘಟನೆಗಳು ಈ ಹಿಂದೆ ಜನವರಿ 29 ರಂದು ನಡೆಸಲು ಉದ್ದೇಶಿಸಿದ್ದ ಬೆಂಗಳೂರು ಚಲೋ ಹೋರಾಟವನ್ನು ಸಾರಿಗೆ ನೌಕರರ ಮುಖಂಡ ಅನಂತ ಸುಬ್ಬರಾವ್‌ ನಿಧನದ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು.

ಇದೀಗ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯು ಗುರುವಾರಕ್ಕೆ ‘ಬೆಂಗಳೂರು ಚಲೋ’ಗೆ ಕರೆ ಕೊಟ್ಟಿದೆ.ಸರಕಾರ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸದ ಕಾರಣಕ್ಕೆ ರಾಜ್ಯ ವ್ಯಾಪಿ ಹೋರಾಟ ನಡೆಸುವುದಾಗಿ ಸಮಿತಿಯು ಅಧಿಕೃತವಾಗಿ ಘೋಷಿಸಿದೆ.

ಫೆ.19 ರಂದು ಬೆಳಗ್ಗೆ ಸಾವಿರಾರು ಸಾರಿಗೆ ನೌಕರರು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಜಮಾಯಿಸಿ ಬೃಹತ್‌ ಮೆರವಣಿಗೆ ನಡೆಸಲಿದ್ದಾರೆ. ನಂತರ ಸಮಿತಿಯ ಮುಖಂಡರು ಚರ್ಚೆ ನಡೆಸಿ ಮುಂದಿನ ಹೋರಾಟದ ರೂಪುರೇಷೆಗಳನ್ನು ಘೋಷಿಸಲಿದ್ದಾರೆ.

ಬಸ್‌ ಸೇವೆ ವ್ಯತ್ಯಯ?

ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕೂ ಸಾರಿಗೆ ನಿಗಮಗಳ ನೌಕರರು ಫೆಬ್ರವರಿ 19 ರಂದು ಕೆಲಸಕ್ಕೆ ಗೈರಾಗಿ ಬೆಂಗಳೂರು ಚಲೋದಲ್ಲಿ ಭಾಗಿಯಾಗುವ ಸಾಧ್ಯತೆಯಿದೆ. ಇದರಿಂದ ರಾಜ್ಯದೆಲ್ಲೆಡೆ ಬಸ್‌ ಸೇವೆಯಲ್ಲಿ ವ್ಯತ್ಯಯವಾಗಬಹುದು.

ಈ ಹಿನ್ನೆಲೆಯಲ್ಲಿ ಸಾರಿಗೆ ನೌಕರರು ಬೆಂಗಳೂರು ಚಲೋ ಹೋರಾಟದಲ್ಲಿ ಭಾಗಿಯಾಗದಂತೆ ಹಾಗೂ ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗುವಂತೆ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷಾ ಆದೇಶ ಹೊರಡಿಸಿದ್ದಾರೆ.

ಸಾರಿಗೆ ನೌಕರರ ಬೇಡಿಕೆಗಳು ಏನು?

ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಹಣ ತಕ್ಷಣವೇ ಬಿಡುಗಡೆ ಮಾಡಬೇಕು. 2024ರ ಜ.1ರಿಂದ ಅನ್ವಯವಾಗುವಂತೆ ನೂತನ ವೇತನ ಶ್ರೇಣಿ ಜಾರಿಗೊಳಿಸಬೇಕು. ಸಾರಿಗೆ ನೌಕರರಿಗೆ ರಾಜ್ಯ ಸರಕಾರಿ ನೌಕರರಿಗೆ ಸರಿ ಸಮಾನವಾದ ವೇತನ ನೀಡಬೇಕು. ಕೆಲಸದ ಅವಧಿಯಲ್ಲಿ ಅಧಿಕಾರಿಗಳಿಂದ ಕಾರ್ಮಿಕರಿಗೆ ಆಗುತ್ತಿರುವ ಕಿರುಕುಳ ತಪ್ಪಿಸಬೇಕು.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

News Source : G1 News

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು