ಸಿಲಿಕಾನ್ ಸಿಟಿಯಲ್ಲಿ ವಿಐಪಿ ಸಂಸ್ಕೃತಿಗೆ ಸಾರ್ವಜನಿಕರು ಹೈರಾಣು!: ರಾಜ್ಯಪಾಲರ ಸಂಚಾರಕ್ಕೆ 30 ನಿಮಿಷ ರಸ್ತೆ ಬ್ಲಾಕ್; ಭೀಕರ ಟ್ರಾಫಿಕ್‌ನಲ್ಲಿ ಸಿಲುಕಿದ ಗರ್ಭಿಣಿ!

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ವಿಐಪಿಗಳ ಭದ್ರತೆ ಹಾಗೂ ಸಂಚಾರದ ಹೆಸರಿನಲ್ಲಿ ಸಾಮಾನ್ಯ ನಾಗರಿಕರ ಹಿತಾಸಕ್ತಿಯನ್ನು ಬಲಿಗೊಡುವ ಘಟನೆಗಳು ಮುಂದುವರಿದಿವೆ. ಈಗಾಗಲೇ ಅಂಡರ್‌ಪಾಸ್ ಕಾಮಗಾರಿಯಿಂದಾಗಿ ಉಸಿರುಗಟ್ಟುತ್ತಿರುವ ಹಳೆಯ ವಿಮಾನ ನಿಲ್ದಾಣ ರಸ್ತೆಯಲ್ಲಿ (Old Airport Road), ಇಂದು ರಾಜ್ಯಪಾಲರ (Governor) ಸಂಚಾರದ ಹಿನ್ನೆಲೆಯಲ್ಲಿ ಸರಿಸುಮಾರು 30 ನಿಮಿಷಗಳ ಕಾಲ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿತ್ತು. ಇದರಿಂದಾಗಿ ಕಿಲೋಮೀಟರ್‌ಗಟ್ಟಲೆ ಭೀಕರ ಟ್ರಾಫಿಕ್ ಜಾಮ್ ಸೃಷ್ಟಿಯಾಗಿದ್ದು, ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಂಡರ್‌ಪಾಸ್ ನಿರ್ಮಾಣ ಕಾರ್ಯದಿಂದಾಗಿ ಮೊದಲೇ ಕಿರಿದಾಗಿದ್ದ ರಸ್ತೆಯಲ್ಲಿ ಯಾವುದೇ ಪರ್ಯಾಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೆ ಏಕಾಏಕಿ ರಸ್ತೆ ನಿರ್ಬಂಧಿಸಿದ್ದರಿಂದ ವಾಹನ ಸವಾರರು ನಡುರಸ್ತೆಯಲ್ಲೇ ಸಿಲುಕಿಕೊಳ್ಳಬೇಕಾಯಿತು. ಈ ಭೀಕರ ಸಂಚಾರ ದಟ್ಟಣೆಯ ನಡುವೆ ತನ್ನ ಗರ್ಭಿಣಿ ಪತ್ನಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿಯೊಬ್ಬರು ಸಿಲುಕಿಕೊಂಡಿದ್ದು, ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಪತ್ನಿಯನ್ನು ಆಸ್ಪತ್ರೆಗೆ ತಲುಪಿಸಲಾಗದೆ ಆ ವ್ಯಕ್ತಿ ನಡುರಸ್ತೆಯಲ್ಲೇ ತೀವ್ರ ಆತಂಕ ಎದುರಿಸಿದರು.

ಇದನ್ನೂ ಓದಿ:Bengaluru: ಎಟಿಎಂ ವ್ಯಾನ್‌ನಿಂದ ಕೋಟಿ ಕೋಟಿ ರೂ. ದರೋಡೆ ಪ್ರಕರಣ; 9 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್

ಇಲ್ಲಿದೆ ನೋಡಿ ವಿಡಿಯೋ

“ಸಾಮಾನ್ಯ ಸಾರ್ವಜನಿಕರ ಹಾಗೂ ತುರ್ತು ಚಿಕಿತ್ಸೆ ಅಗತ್ಯವಿರುವ ರೋಗಿಗಳ ಅನುಕೂಲ ಮತ್ತು ಜೀವವು ವಿಐಪಿಗಳ ಸೌಕರ್ಯದಷ್ಟೇ ಮುಖ್ಯವಾಗುವುದು ಯಾವಾಗ?” ಎಂದು ಸ್ಥಳೀಯ ನಿವಾಸಿಗಳು ಮತ್ತು ವಾಹನ ಸವಾರರು ಕಟುವಾಗಿ ಪ್ರಶ್ನಿಸಿದ್ದಾರೆ. ಸೋಷಿಯಲ್ ಮೀಡಿಯಾಗಳಲ್ಲಿ ನೆಟ್ಟಿಗರು ಬೆಂಗಳೂರು ಟ್ರಾಫಿಕ್ ಪೊಲೀಸ್ (BTP) ವ್ಯವಸ್ಥೆಯ ವಿರುದ್ಧ ಭಾರಿ ಆಕ್ರೋಶ ಹೊರಹಾಕುತ್ತಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

 

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು