ಬೆಂಗಳೂರು: ಬಿಗ್ ಬಾಸ್ ಖ್ಯಾತಿಯ ವರ್ತೂರು ಸಂತೋಷ್ ಅವರು ಹುಲಿ ಉಗುರು ಧರಿಸಿ ಜೈಲು ಪಾಲಾಗಿದ್ದ ವಿವಾದ ಮಾಸುವ ಮುನ್ನವೇ, ಕನ್ನಡ ಕಿರುತೆರೆಯ ಜನಪ್ರಿಯ ಜೋಡಿಯಾದ ನಟ ಕಿಶನ್ ಬಿಳಗಲಿ ಹಾಗೂ ನಟಿ ನಿವೇದಿತಾ ಗೌಡ ಈಗ ನವಿಲುಗರಿ (Peacock Feathers) ಬಳಸಿ ದೊಡ್ಡ ಸಂಕಷ್ಟಕ್ಕೆ ಸಿಲುಕಿದ್ದಾರೆ. ನೈಜ ನವಿಲುಗರಿಗಳನ್ನು ಬಳಸಿ ಸಿದ್ಧಪಡಿಸಲಾಗಿದ್ದ ಉಡುಪುಗಳನ್ನು ಧರಿಸಿ ಸೋಷಿಯಲ್ ಮೀಡಿಯಾದಲ್ಲಿ ರೀಲ್ಸ್ ಹಂಚಿಕೊಂಡಿದ್ದ ಈ ಜೋಡಿಯ ವಿರುದ್ಧ ಅರಣ್ಯ ಇಲಾಖೆಗೆ ಅಧಿಕೃತ ದೂರು ದಾಖಲಾಗಿದೆ.
ನಾಲ್ಕೈದು ದಿನಗಳ ಹಿಂದೆ ನಟ ಕಿಶನ್ ಹಾಗೂ ನಿವೇದಿತಾ ಗೌಡ ಅವರು ನವಿಲು ಗರಿಗಳಿಂದ ಅಲಂಕೃತಗೊಂಡಿದ್ದ ವಿಭಿನ್ನ ಉಡುಪುಗಳನ್ನು ಧರಿಸಿ ಜಂಟಿಯಾಗಿ ರೀಲ್ಸ್ ಮಾಡಿದ್ದರು. ಇದನ್ನು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣಗಳ ಖಾತೆಯಲ್ಲಿ ಹಂಚಿಕೊಂಡಿದ್ದರು. ಆದರೆ, ಭಾರತದ ರಾಷ್ಟ್ರೀಯ ಪಕ್ಷಿಯಾದ ನವಿಲಿನ ನೈಜ ಗರಿಗಳನ್ನು ಬಳಸಿ ಉಡುಪು ತಯಾರಿಸುವುದು, ಅದನ್ನು ಸಾರ್ವಜನಿಕವಾಗಿ ಪ್ರದರ್ಶಿಸುವುದು ಮತ್ತು ಪ್ರಚಾರ ಮಾಡುವುದು ವನ್ಯಜೀವಿ (ಸಂರಕ್ಷಣಾ) ಕಾಯ್ದೆ, 1972ರ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಪ್ರಮುಖ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಸಮಂತಾ ತಾಯಿ ಆಗ್ತಿರೋದು ಸತ್ಯ ಎಂದ ನಿರ್ದೇಶಕಿ ನಂದಿನಿ ರೆಡ್ಡಿ!; ಸಿನಿಮಾ ಸಕ್ಸಸ್ ಬೆನ್ನಲ್ಲೇ ಗುಡ್ ನ್ಯೂಸ್ ಕೊಟ್ಟ ನಟಿ
ಇಲ್ಲಿದೆ ನೋಡಿ ವಿಡಿಯೋ:
Double standards? Farmer leader Darshan Puttannaiah faced a wildlife complaint on March 14, 2023 for wearing a peacock feather garland (Wildlife Protection Act 1972).
Now, Kannada TV actress Nivedita Gowda & dancer Kishen Bilagali dance in a viral ‘Hey Navile’ reel she in peacock… pic.twitter.com/kYwl678c0O— ಸನಾತನ (सनातन) (@sanatan_kannada) June 19, 2026
ದಿನೇಶ್ ಕಲ್ಲಹಳ್ಳಿ ಅವರು ಬೆಂಗಳೂರು ಪ್ರಾದೇಶಿಕ ನಗರ ವಿಭಾಗದ ವ್ಯಾಪ್ತಿಯ ಕಗ್ಗಲಿಪುರ ಅರಣ್ಯ ವಲಯ ಅಧಿಕಾರಿಗಳಿಗೆ ಈ ಸಂಬಂಧ ಲಿಖಿತ ದೂರು ನೀಡಿದ್ದಾರೆ. “ನವಿಲುಗರಿಗಳ ಅಕ್ರಮ ಬಳಕೆ ಕುರಿತು ತಕ್ಷಣವೇ ಎಫ್ಐಆರ್ ದಾಖಲಿಸಿಕೊಂಡು ಕಟ್ಟುನಿಟ್ಟಿನ ತನಿಖೆ ನಡೆಸಬೇಕು. ಈ ತನಿಖೆಯ ಅವಧಿಯಲ್ಲಿ ಯಾವುದೇ ರೀತಿಯ ರಾಜಕೀಯ ಪ್ರಭಾವ ಅಥವಾ ಹಸ್ತಕ್ಷೇಪಕ್ಕೆ ಅವಕಾಶ ನೀಡಬಾರದು. ಸೆಲೆಬ್ರಿಟಿಗಳ ವಿರುದ್ಧ ಪಾರದರ್ಶಕವಾಗಿ ಕಾನೂನು ಕ್ರಮ ಜರುಗಿಸಬೇಕು” ಎಂದು ಅವರು ಹಿರಿಯ ಅರಣ್ಯ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ. ಈ ದೂರಿನ ಹಿನ್ನೆಲೆಯಲ್ಲಿ ಕಿಶನ್ ಮತ್ತು ನಿವೇದಿತಾ ಗೌಡ ಅವರಿಗೆ ಅರಣ್ಯ ಇಲಾಖೆ ನೋಟಿಸ್ ನೀಡುವ ಸಾಧ್ಯತೆ ದಟ್ಟವಾಗಿದೆ.
ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

