ನವದೆಹಲಿ: ಎದೆಗೂಡಿನ ಸೋಂಕಿನಿಂದಾಗಿ (Chest Infection) ನವದೆಹಲಿಯ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದ ಭಾರತೀಯ ಜನತಾ ಪಾರ್ಟಿಯ (BJP) ಹಿರಿಯ ನಾಯಕ, ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ (98) ಅವರು ಚೇತರಿಸಿಕೊಂಡಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಈ ಕುರಿತು ಅಧಿಕೃತ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅಪೋಲೊ ಆಸ್ಪತ್ರೆ ಆಡಳಿತ ಮಂಡಳಿ, “ಅಕ್ಟೋಬರ್ 16 ರಂದು ಎದೆಗೂಡಿನ ಸೋಂಕಿನಿಂದ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದ ಶ್ರೀ ಎಲ್.ಕೆ. ಅಡ್ವಾಣಿ ಅವರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಿದ್ದಾರೆ” ಎಂದು ತಿಳಿಸಿದೆ. ಹಿರಿಯ ನರರೋಗ ತಜ್ಞ ಡಾ. ವಿನೀತ್ ಸೂರಿ ಅವರ ನೇತೃತ್ವದ ವೈದ್ಯರ ತಂಡವು ಅದ್ವಾಣಿ ಅವರ ಆರೋಗ್ಯದ ಉಸ್ತುವಾರಿ ವಹಿಸಿದ್ದು, ಅವರ ಆರೋಗ್ಯ ಸ್ಥಿತಿಯಲ್ಲಿ ಉತ್ತಮ ಚೇತರಿಕೆ ಕಂಡುಬಂದಿದೆ.
ಇದನ್ನೂ ಓದಿ: ಹಿರಿಯ ರಾಜಕಾರಣಿ ಲಾಲ್ ಕೃಷ್ಣ ಅಡ್ವಾಣಿ ಆರೋಗ್ಯದಲ್ಲಿ ಏರುಪೇರು: ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು
ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ಎಲ್.ಕೆ. ಅಡ್ವಾಣಿ ಅವರು ಇತ್ತೀಚೆಗೆ ನಿಯಮಿತ ತಪಾಸಣೆ ಹಾಗೂ ಚಿಕಿತ್ಸೆಗೆ ಒಳಗಾಗುತ್ತಿದ್ದು, ಪ್ರಸ್ತುತ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

