ಲೋಕಾಯುಕ್ತ ದಾಳಿ: ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀಕ್ಷಕ ಎಂಜಿನಿಯರ್ ಮನೆಯಲ್ಲಿ ಕಂತೆ ಕಂತೆ ಹಣ

ಬೆಂಗಳೂರು, ಫೆ.12: ಕರ್ನಾಟಕದಾದ್ಯಂತ ಇಂದು ಭ್ರಷ್ಟ ಅಧಿಕಾರಿಗಳ ವಿರುದ್ಧ ನಡೆಯುತ್ತಿರುವ ಲೋಕಾಯುಕ್ತ ದಾಳಿಯ ಭಾಗವಾಗಿ ಬೆಂಗಳೂರು ಗ್ರಾಮಾಂತರ ಲೋಕಾಯುಕ್ತ ಠಾಣೆಯಲ್ಲಿ ಮತ್ತೊಂದು ದೊಡ್ಡ ಭ್ರಷ್ಟಾಚಾರ ಪ್ರಕರಣ ದಾಖಲಾಗಿದೆ. ಬೆಂಗಳೂರು ಗ್ರಾಮಾಂತರ ಲೋಕಾಯುಕ್ತ ಠಾಣೆಯಲ್ಲಿ ಮತ್ತೊಂದು ದೊಡ್ಡ ಭ್ರಷ್ಟಾಚಾರ ಪ್ರಕರಣ ದಾಖಲಾಗಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (KREIS) ಅಧೀಕ್ಷಕ ಎಂಜಿನಿಯರ್ (Superintendent Engineer) ಎಚ್.ಎಂ. ಜನಾರ್ದನ್ ಅವರ ಮೇಲೆ ಅಕ್ರಮ ಆಸ್ತಿ ಗಳಿಕೆ ಆರೋಪದಡಿ ದಾಳಿ ನಡೆಸಲಾಗಿದೆ.

ಈ ಪ್ರಕರಣದ ಅತ್ಯಂತ ಆಘಾತಕಾರಿ ಅಂಶವೆಂದರೆ, ಆರೋಪಿ ಎಚ್.ಎಂ. ಜನಾರ್ದನ್ ಅವರ ಆಪ್ತ ಗೆಳೆಯ ಸುಜಯ್ ಶೆಟ್ಟಿ ಅವರಿಗೆ ಸೇರಿದ ನಿವೇಶನದಲ್ಲಿ (Plot) ಲೋಕಾಯುಕ್ತ ಅಧಿಕಾರಿಗಳು ಶೋಧ ನಡೆಸಿದಾಗ ಬರೋಬ್ಬರಿ 1.70 ಕೋಟಿ ರೂಪಾಯಿ ನಗದು ಪತ್ತೆಯಾಗಿದೆ. ಈ ಹಣವನ್ನು ಅಕ್ರಮವಾಗಿ ಬಚ್ಚಿಡಲಾಗಿತ್ತು ಎಂಬ ಸಂಶಯ ವ್ಯಕ್ತವಾಗಿದೆ.

ಇದನ್ನೂ ಓದಿ: ಕರ್ನಾಟಕದಾದ್ಯಂತ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್

ಇಲ್ಲಿದೆ ನೋಡಿ ವಿಡಿಯೋ: (ಎಎನ್​​ಐ)

ಲೋಕಾಯುಕ್ತ ಪೊಲೀಸರ ತಂಡವು ಜನಾರ್ದನ್ ಅವರಿಗೆ ಸಂಬಂಧಿಸಿದ ಒಟ್ಟು ಆರು ಸ್ಥಳಗಳಲ್ಲಿ ಏಕಕಾಲಕ್ಕೆ ಶೋಧ ನಡೆಸುತ್ತಿದೆ. ಇವುಗಳಲ್ಲಿ ಅವರ ನಿವಾಸ, ಕಚೇರಿ ಮತ್ತು ಅವರ ಆಪ್ತರು ಹಾಗೂ ಸಂಬಂಧಿಕರ ಮನೆಗಳು ಸೇರಿವೆ.ರಾಜ್ಯದ ವಿವಿಧ ಇಲಾಖೆಗಳಲ್ಲಿರುವ ಉನ್ನತ ಮಟ್ಟದ ಅಧಿಕಾರಿಗಳು ತಮ್ಮ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಬಗ್ಗೆ ಬಂದ ದೂರುಗಳ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಜನಾರ್ದನ್ ಅವರು ಪ್ರಭಾವಿ ಹುದ್ದೆಯಲ್ಲಿದ್ದ ಕಾರಣ, ಈ ಪ್ರಕರಣವು ಸರ್ಕಾರಿ ವಲಯದಲ್ಲಿ ಸಂಚಲನ ಮೂಡಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ