ಕೊಪ್ಪಳದಲ್ಲಿ ಲವ್ ಜಿಹಾದ್ ಸಂಚಲನ: ಹಿಂದೂ ಯುವತಿಯರ ಅಶ್ಲೀಲ ವಿಡಿಯೋ ಪತ್ತೆ, ಸಿಡಿದೆದ್ದ ಕೇಸರಿ ಪಡೆ!

ಕೊಪ್ಪಳ: ಹುಬ್ಬಳ್ಳಿಯ ಬೆನ್ನಲ್ಲೇ ಇದೀಗ ಕೊಪ್ಪಳ ಜಿಲ್ಲೆಯಲ್ಲೂ ಲವ್ ಜಿಹಾದ್ ಆರೋಪ ಕೇಳಿಬಂದಿದ್ದು, ಅನ್ಯಕೋಮಿನ ಯುವಕನೊಬ್ಬ ಹಿಂದೂ ನರ್ಸಿಂಗ್ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.

ಕುಷ್ಟಗಿ ತಾಲೂಕಿನ ಗ್ರಾಮವೊಂದರ ಹಿಂದೂ ವಿದ್ಯಾರ್ಥಿನಿ ಕೊಪ್ಪಳದಲ್ಲಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದಳು. ಈಕೆಯ ಜೊತೆ ಸಲುಗೆ ಬೆಳೆಸಿದ್ದ ಕೊಪ್ಪಳ ತಾಲೂಕಿನ ಕಂಪ್ಲಿ ಗ್ರಾಮದ ಮುಸ್ತಫಾ ಎಂಬ ಯುವಕ, ಆಕೆಯನ್ನು ಪ್ರೀತಿಯ ಹೆಸರಲ್ಲಿ ಪುಸಲಾಯಿಸಿದ್ದ ಎನ್ನಲಾಗಿದೆ. ಗ್ರಾಮವೊಂದರಲ್ಲಿ ವಿದ್ಯಾರ್ಥಿನಿ ಜೊತೆಗಿದ್ದಾಗ ಈತ ಹಿಂದೂ ಯುವಕರ ಕೈಗೆ ಸಿಕ್ಕಿಬಿದ್ದಿದ್ದಾನೆ.

Advertisement

ಮುಸ್ತಫಾನನ್ನು ಹಿಡಿದು ಆತನ ಮೊಬೈಲ್ ಪರಿಶೀಲಿಸಿದಾಗ ಸ್ಫೋಟಕ ಮಾಹಿತಿ ಲಭ್ಯವಾಗಿದೆ. ಆತನ ಮೊಬೈಲ್‌ನಲ್ಲಿ ಕೇವಲ ಈ ವಿದ್ಯಾರ್ಥಿನಿ ಮಾತ್ರವಲ್ಲದೆ, ಸುಮಾರು 10ಕ್ಕೂ ಹೆಚ್ಚು ಹಿಂದೂ ಯುವತಿಯರ ಜೊತೆಗಿರುವ ಅಶ್ಲೀಲ ವಿಡಿಯೋಗಳು ಮತ್ತು ಫೋಟೋಗಳು ಪತ್ತೆಯಾಗಿವೆ. ಕೆಲವು ವಿಡಿಯೋಗಳಲ್ಲಿ ಯುವತಿಯರಿಗೆ ಬಿಯರ್ ಕುಡಿಸಿರುವುದು ಹಾಗೂ ಮಟ್ಕಾ ದಂಧೆಯಲ್ಲಿ ತೊಡಗಿರುವುದು ಕಂಡುಬಂದಿದೆ ಎನ್ನಲಾಗಿದೆ. ಯುವಕರು ಮೊಬೈಲ್ ವಶಪಡಿಸಿಕೊಳ್ಳುವ ಮುನ್ನವೇ ಆರೋಪಿ ಅದನ್ನು ‘ಫ್ಯಾಕ್ಟರಿ ರಿಸೆಟ್’ ಮಾಡಿ ಪುರಾವೆ ನಾಶಪಡಿಸಲು ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಪಿಯುಸಿ ರಿಸಲ್ಟ್ ಎಫೆಕ್ಟ್: ನಿರೀಕ್ಷಿತ ಅಂಕ ಬರದ್ದಕ್ಕೆ ಮನನೊಂದು ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ!

Advertisement

ಈ ವಿಚಾರ ತಿಳಿಯುತ್ತಿದ್ದಂತೆಯೇ ವಿಶ್ವ ಹಿಂದೂ ಪರಿಷತ್ ಮತ್ತು ಇತರ ಹಿಂದೂ ಸಂಘಟನೆಗಳ ಕಾರ್ಯಕರ್ತರು ಕೊಪ್ಪಳ ನಗರ ಪೊಲೀಸ್ ಠಾಣೆ ಎದುರು ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಎಚ್‌ಪಿ ಜಿಲ್ಲಾಧ್ಯಕ್ಷ ಡಾ. ಸಂಗಮೇಶ್ ಹಿರೇಮಠ ನೇತೃತ್ವದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ (SP) ದೂರು ನೀಡಲಾಗಿದ್ದು, ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Advertisement

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು