ಲಕ್ನೋದ ಕೋಚಿಂಗ್ ಸೆಂಟರ್‌ನಲ್ಲಿ ಭೀಕರ ಅಗ್ನಿ ಅವಘಡ; 15 ವಿದ್ಯಾರ್ಥಿಗಳು ಸಜೀವ ದಹನ, ಪ್ರಾಣ ಉಳಿಸಿಕೊಳ್ಳಲು ಮೊದಲ ಮಹಡಿಯಿಂದ ಜಿಗಿದ ಯುವಕರು!

ಲಕ್ನೋ: ಉತ್ತರ ಪ್ರದೇಶದ ರಾಜಧಾನಿ ಲಕ್ನೋದ ಅಲಿಗಂಜ್ ಪ್ರದೇಶದಲ್ಲಿ ಸೋಮವಾರ ಮಧ್ಯಾಹ್ನ ಎದೆನಡುಗಿಸುವ ಭೀಕರ ಅಗ್ನಿ ದುರಂತವೊಂದು ಸಂಭವಿಸಿದೆ. ಇಲ್ಲಿನ ಬಹುಮಹಡಿ ವಾಣಿಜ್ಯ ಕಟ್ಟಡದಲ್ಲಿರುವ ಆನಿಮೇಷನ್ ಕೋಚಿಂಗ್ ಸೆಂಟರ್‌ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ 15 ವಿದ್ಯಾರ್ಥಿಗಳು ದುರಂತವಾಗಿ ಸಾವನ್ನಪ್ಪಿದ್ದಾರೆ.

ಅಲಿಗಂಜ್‌ನ ಕಮರ್ಷಿಯಲ್ ಪ್ರದೇಶದಲ್ಲಿರುವ ಈ ಮೂರು ಅಂತಸ್ತಿನ ಕಟ್ಟಡದಲ್ಲಿ ಕೋಚಿಂಗ್ ಸೆಂಟರ್ ಮಾತ್ರವಲ್ಲದೆ ಗೇಮಿಂಗ್ ಜೋನ್, ಪೆಟ್ ಕ್ಲಿನಿಕ್ ಮತ್ತು ಪ್ರಾಣಿಗಳ ಪರಿಕರಗಳ ಅಂಗಡಿ ಸೇರಿದಂತೆ ಹಲವು ಮಳಿಗೆಗಳಿದ್ದವು. ಮೊದಲ ಮಹಡಿಯಲ್ಲಿದ್ದ ಕೋಚಿಂಗ್ ಸೆಂಟರ್‌ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ದಟ್ಟವಾದ ಹೊಗೆ ಇಡೀ ಕಟ್ಟಡವನ್ನು ಆವರಿಸಿದೆ. ಇದರಿಂದಾಗಿ ಒಳಗೆ ಸಿಲುಕಿಕೊಂಡಿದ್ದ ವಿದ್ಯಾರ್ಥಿಗಳಲ್ಲಿ ತೀವ್ರ ಆತಂಕ ಸೃಷ್ಟಿಯಾಗಿದೆ. ಪ್ರಾಣ ಉಳಿಸಿಕೊಳ್ಳಲು ಹಲವು ವಿದ್ಯಾರ್ಥಿಗಳು ಮೊದಲ ಮಹಡಿಯ ರೇಲಿಂಗ್‌ನಿಂದ ಕೆಳಗೆ ಜಿಗಿದಿದ್ದಾರೆ. ಈ ವೇಳೆ ಯುವಕನೊಬ್ಬ ಕೆಳಗೆ ಬೀಳುತ್ತಿರುವ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ.

Advertisement

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸರು ಹಾಗೂ ರಕ್ಷಣಾ ತಂಡಗಳು ಸುದೀರ್ಘ ಕಾರ್ಯಾಚರಣೆ ನಡೆಸಿದವು. ಅಕ್ಕಪಕ್ಕದ ಕಟ್ಟಡದ ಮೇಲ್ಛಾವಣಿಯ ಗೋಡೆಯನ್ನು ಕೊರೆದು ಒಳಗೆ ಪ್ರವೇಶಿಸಿದ ರಕ್ಷಣಾ ಸಿಬ್ಬಂದಿ ಸುಮಾರು 12ಕ್ಕೂ ಹೆಚ್ಚು ಜನರನ್ನು ಸುರಕ್ಷಿತವಾಗಿ ಹೊರತಂದಿದ್ದಾರೆ. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಹcontrolಗೆ ತರಲಾಗಿದ್ದು, ಸದ್ಯದ ಮಾಹಿತಿಯ ಪ್ರಕಾರ ಕಟ್ಟಡದೊಳಗಿಂದ 15 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಗಾಯಗೊಂಡವರನ್ನು ಕಿಂಗ್ ಜಾರ್ಜ್ ಮೆಡಿಕಲ್ ಯೂನಿವರ್ಸಿಟಿ (KGMU) ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ; Crime: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ದೈಹಿಕ ಶಿಕ್ಷಕನಿಗೆ ಶಿಕ್ಷೆ ಪ್ರಕಟ

ಪ್ರಧಾನಿ ನರೇಂದ್ರ ಮೋದಿ ಅವರು ಘಟನೆಗೆ ತೀವ್ರ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ₹2 ಲಕ್ಷ ಹಾಗೂ ಗಾಯಗೊಂಡವರಿಗೆ ₹50,000 ಪರಿಹಾರ ಘೋಷಿಸಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದು, ಘಟನೆಯ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *