ಸುಳ್ಯ: ಅತಿಥಿ ಉಪನ್ಯಾಸಕರ ವೇತನ ಪರಿಷ್ಕರಣೆ ಹಾಗೂ ಕಾರ್ಯಭಾರದ ಕುರಿತು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಕೇಳಿದ ಪ್ರಶ್ನೆಗೆ ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ಅವರು ಲಿಖಿತ ಉತ್ತರ ನೀಡಿದ್ದಾರೆ.
ಪ್ರಸ್ತುತ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕರಿಗೆ ವಾರದಲ್ಲಿ 10-12 ಗಂಟೆ ಕಾರ್ಯಭಾರ ನೀಡಿದ್ದು, ಯಾವುದೇ ವಿಷಯದಲ್ಲಿ ಇದರಂತೆ ಹೆಚ್ಚಿನ ಕಾರ್ಯಭಾರವಿದ್ದಲ್ಲಿ ಇಬ್ಬರು ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಲು ಅನುಮತಿ ನೀಡಲಾಗಿರುತ್ತದೆ.

ಇದನ್ನೂ ಓದಿ: ಕಾಂಬೋಡಿಯದಲ್ಲಿ ಸಿಲುಕಿದ್ದ ಮಂಗಳೂರಿನ ಐವರ ರಕ್ಷಣೆ
ಇದರ ಬದಲಾಗಿ ಒಬ್ಬರೇ ಉಪನ್ಯಾಸಕರಿಗೆ ಪೂರ್ಣ ಕಾರ್ಯಭಾರವನ್ನು ನೀಡಿ ಪ್ರಸ್ತುತ ಅವರಿಗೆ ನೀಡುತ್ತಿರುವ ವೇತನವನ್ನು ಪದವಿ ಕಾಲೇಜಿನ ಅತಿಥಿ ಉಪನ್ಯಾಸಕರಿಗೆ ನೀಡುತ್ತಿರುವಂತೆ ಪರಿಷ್ಕರಣೆ ಮಾಡುವ ಪ್ರಸ್ತಾವನೆ ರಾಜ್ಯ ಸರ್ಕಾರದ ಮುಂದಿದೆಯೇ? ಇದ್ದಲ್ಲಿ ಕೈಗೊಂಡ ಕ್ರಮಗಳೇನು ಎಂದು ಶಾಸಕಿ ಮುರುಳ್ಯ ಅವರು ಲಿಖಿತ ಪ್ರಶ್ನೆ ಕೇಳಿದ್ದರು.

ಇದಕ್ಕೆ ಉತ್ತರಿಸಿದ ಮಧು ಬಂಗಾರಪ್ಪ, ರಾಜ್ಯದಲ್ಲಿ ಪ್ರಸ್ತುತ ತಾತ್ಕಾಲಿಕವಾಗಿ ನೇಮಕಗೊಳ್ಳುವ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ 14000 ರೂ. ಗೌರವಧನ ನೀಡಲಾಗುತ್ತಿದ್ದು, ಆಯಾ ಶೈಕ್ಷಣಿಕ ವರ್ಷದ ೧೦ ತಿಂಗಳ ಅವಧಿಗೆ ಅಂದರೆ ಜೂನ್ ಮಾಹೆಯಿಂದ ಮಾರ್ಚ್ ಮಾಹೆಯವರೆಗೆ ಗೌರವಧನ ಬಿಡುಗಡೆ ಮಾಡಲಾಗುತ್ತಿದೆ ಎಂದಿದ್ದಾರೆ.
ಅಲ್ಲದೆ, 2025ರ ಮೇ 15 ರಂದು ಸರ್ಕಾರವು ಗೌರವ ಸಂಭಾವನೆಯನ್ನು 14 ಸಾವಿರ ರೂ.ಗೆ ಹೆಚ್ಚಿಸಿ ಆದೇಶಿಸಿರುವುದರಿಂದ ಇಂತಹ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಹೇಳಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
(ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್: 7353833811, ಇ-ಮೇಲ್- g1newsdpt@gmail.com)

