ಮಡಿಕೇರಿ, ಏ, 03: ಕೊಡಗು ಜಿಲ್ಲೆಯ ಅತ್ಯಂತ ಎತ್ತರದ ಶಿಖರವಾದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಶರಣ್ಯ ಜಿ.ಎಸ್. ಎಂಬ ಯುವತಿ ನಾಪತ್ತೆಯಾಗಿದ್ದಾರೆ. ಈ ಘಟನೆ ಸ್ಥಳೀಯವಾಗಿ ಮತ್ತು ಪ್ರವಾಸಿಗರಲ್ಲಿ ಭೀತಿ ಮೂಡಿಸಿದೆ.
ಶರಣ್ಯ ಅವರು ಕಕ್ಕಬ್ಬೆ ಗ್ರಾಮದ ಖಾಸಗಿ ಹೋಂಸ್ಟೇಯಲ್ಲಿ ತಂಗಿದ್ದರು. ಗುರುವಾರ ಇತರ 9 ಜನರ ತಂಡದೊಂದಿಗೆ ಚಾರಣಕ್ಕೆ ತೆರಳಿದ್ದರು. ಚಾರಣದ ವೇಳೆ ನಾಯಿಗಳ ಜೊತೆ ಆಟವಾಡುತ್ತಾ ತಂಡಕ್ಕಿಂತ ಹಿಂದೆ ಉಳಿದ ಶರಣ್ಯ, ದಾರಿ ತಪ್ಪಿ ಗುಂಪಿನಿಂದ ಬೇರ್ಪಟ್ಟಿದ್ದಾರೆ ಎನ್ನಲಾಗಿದೆ.ತಾನು ದಾರಿ ತಪ್ಪಿರುವುದಾಗಿ ಶರಣ್ಯ ಅವರು ಹೋಂಸ್ಟೇ ಮಾಲೀಕನಿಗೆ ಫೋನ್ ಮಾಡಿ ತಿಳಿಸಿದ್ದರು. ಆದರೆ, ಆನಂತರ ಅವರ ಮೊಬೈಲ್ ‘ನಾಟ್ ರೀಚೇಬಲ್’ ಆಗಿದೆ.

ಇದನ್ನೂ ಓದಿ: ಪುತ್ತೂರು: ಗ್ಯಾಸ್ ಅಭಾವ; ಸಂಪ್ಯದಲ್ಲಿ ಆಟೋ ರಿಕ್ಷಾಗಳ ಕಿಲೋಮೀಟರ್ ಉದ್ದದ ಸರತಿ ಸಾಲು!
ನಾಲ್ಕು ತಂಡಗಳಿಂದ ಕಾರ್ಯಾಚರಣೆ: ಅರಣ್ಯ ಇಲಾಖೆ, ಪೊಲೀಸ್ ಮತ್ತು ಶ್ವಾನ ದಳದ ಸುಮಾರು 50ಕ್ಕೂ ಹೆಚ್ಚು ಸಿಬ್ಬಂದಿ ಒಳಗೊಂಡ ನಾಲ್ಕು ತಂಡಗಳು ಶೋಧ ನಡೆಸುತ್ತಿವೆ.ದಟ್ಟ ಮಳೆಮೋಡ, ಕಡಿದಾದ ಹಾದಿ ಮತ್ತು ಕಾಡಾನೆಗಳ ಹಾವಳಿ ಇರುವುದರಿಂದ ಕಾರ್ಯಾಚರಣೆಗೆ ತೀವ್ರ ಅಡ್ಡಿಯಾಗುತ್ತಿದೆ. ರಾತ್ರಿ 3 ಗಂಟೆಯವರೆಗೂ ಹುಡುಕಾಟ ನಡೆಸಿದರೂ ಶರಣ್ಯ ಅವರ ಸುಳಿವು ಸಿಕ್ಕಿಲ್ಲ. ಇಂದು ಬೆಳಗ್ಗೆಯಿಂದ ಶೋಧ ಕಾರ್ಯ ಮುಂದುವರೆದಿದೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


