ಗ್ರಾಹಕರ ಸೋಗಿನಲ್ಲಿ ಬಂದು ಸರಗಳ್ಳತನ: ಮಾಗಡಿಯಲ್ಲಿ ಹಾಡಹಗಲೇ ಮಹಿಳೆಯ ಚಿನ್ನದ ಸರ ಲೂಟಿ!

ಮಾಗಡಿ: ಕಾನೂನಿನ ಭಯವಿಲ್ಲದ ಖದೀಮರು ಗ್ರಾಹಕರ ಸೋಗಿನಲ್ಲಿ ಬಂದು ಮಹಿಳೆಯೊಬ್ಬರ ಚಿನ್ನದ ಸರವನ್ನು ಕಿತ್ತು ಪರಾರಿಯಾಗಿರುವ ಘಟನೆ ಮಾಗಡಿ ತಾಲೂಕಿನ ಕುದೂರು ಹೋಬಳಿಯ ಗುಡ್ಡೆಮಾರನಹಳ್ಳಿಯಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.

ಗುಡ್ಡೆಮಾರನಹಳ್ಳಿ ಹ್ಯಾಂಡ್ ಪೋಸ್ಟ್ ಬಳಿಯ ಬೇಕರಿ ಮುಂಭಾಗದಲ್ಲಿ ಈ ಕೃತ್ಯ ನಡೆದಿದೆ. ಇಬ್ಬರು ಅಪರಿಚಿತ ವ್ಯಕ್ತಿಗಳು ಏನನ್ನೋ ಕೊಳ್ಳುವವರಂತೆ ಗ್ರಾಹಕರ ಸೋಗಿನಲ್ಲಿ ಮಹಿಳೆಯನ್ನು ಸಮೀಪಿಸಿದ್ದಾರೆ. ಮಹಿಳೆ ಯಾವುದೋ ಕೆಲಸದಲ್ಲಿ ನಿರತರಾಗಿದ್ದಾಗ, ಒಮ್ಮೆಲೇ ಆಕೆಯ ಕೊರಳಿನಲ್ಲಿದ್ದ ಚಿನ್ನದ ಸರವನ್ನು ಕಿತ್ತುಕೊಂಡು ಬೈಕ್‌ನಲ್ಲಿ ಪರಾರಿಯಾಗಿದ್ದಾರೆ.

Advertisement

ಇದನ್ನೂ ಓದಿ: ಮಂಗಳೂರು: ಬಾವಿ ತೋಡುವಾಗ ಅವಘಡ; ಕಾರ್ಮಿಕ ಸಾವು

ಜನನಿಬಿಡ ಪ್ರದೇಶದಲ್ಲಿ, ಅದೂ ಹಾಡಹಗಲೇ ಇಂತಹ ಘಟನೆ ನಡೆದಿರುವುದು ಸ್ಥಳೀಯರಲ್ಲಿ ಭೀತಿ ಮೂಡಿಸಿದೆ. ಕಳ್ಳರು ಎಷ್ಟೊಂದು ಧೈರ್ಯಶಾಲಿಗಳಾಗಿದ್ದಾರೆ ಎಂದರೆ, ಜನವಸತಿ ಪ್ರದೇಶದಲ್ಲೂ ಮೋಸದ ಹಾದಿ ಹಿಡಿದು ಅಮಾಯಕರನ್ನು ಗುರಿ ಮಾಡುತ್ತಿದ್ದಾರೆ. ಈ ಭಾಗದಲ್ಲಿ ಸಿಸಿಟಿವಿ (CCTV) ಕಣ್ಗಾವಲು ಮತ್ತು ಪೊಲೀಸ್ ಗಸ್ತು ಕೊರತೆಯೇ ಕಳ್ಳರಿಗೆ ವರದಾನವಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಲ್ಲಿದೆ ನೋಡಿ ವಿಡಿಯೋ:

ಘಟನೆಗೆ ಸಂಬಂಧಿಸಿದಂತೆ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು