ಪ್ರಧಾನಿ ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ: “ಟ್ರಂಪ್ ಸರ್ವಾಧಿಕಾರಿ, ಮೋದಿ ಅವರ ಗುಲಾಮ”

ದೆಹಲಿ: ಕೇಂದ್ರ ಸರ್ಕಾರದ ವಿದೇಶಾಂಗ ನೀತಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯವೈಖರಿಯನ್ನು ಟೀಕಿಸುವ ಭರದಲ್ಲಿ ಕಾಂಗ್ರೆಸ್ ಮಲ್ಲಿಕಾರ್ಜುನ ಖರ್ಗೆ ಅವರು ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒಬ್ಬ ಸರ್ವಾಧಿಕಾರಿ ಎಂದು ಕರೆದಿರುವ ಖರ್ಗೆ, ಪ್ರಧಾನಿ ಮೋದಿಯವರು ಅವರ ಗುಲಾಮನಂತೆ ವರ್ತಿಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಭಾರತದ ಸ್ವಾಭಿಮಾನವನ್ನು ಅಡವಿಟ್ಟು ಮೋದಿ ಸರ್ಕಾರ ಅಮೆರಿಕದ ಹಿತಾಸಕ್ತಿಗಾಗಿ ಕೆಲಸ ಮಾಡುತ್ತಿದೆ ಎಂದು ಖರ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ಅಮೆರಿಕದಲ್ಲಿ ಟ್ರಂಪ್ ಸರ್ವಾಧಿಕಾರಿಯಂತೆ ನಡೆದುಕೊಳ್ಳುತ್ತಿದ್ದಾರೆ. ಆದರೆ ನಮ್ಮ ದೇಶದ ಪ್ರಧಾನಿಗಳು ಅದನ್ನು ಪ್ರಶ್ನಿಸುವ ಬದಲು ಅವರ ಹಾದಿಯಲ್ಲೇ ಸಾಗುತ್ತಿದ್ದಾರೆ ಅಥವಾ ಅವರ ಮಾತಿನಂತೆ ಕೇಳುತ್ತಿದ್ದಾರೆ” ಎಂದು ಖರ್ಗೆ ಗುಡುಗಿದ್ದಾರೆ.

ಇದನ್ನೂ ಓದಿ: “ಮಮತಾ ನನ್ನ ಮೇಲೆ ಕೋಪಗೊಂಡಿದ್ದಾರೋ ಏನೋ..”: ಸಿಎಂ ಗೈರು ಹಾಜರಿಗೆ ರಾಷ್ಟ್ರಪತಿ ಮುರ್ಮು ಬೇಸರ

ಖರ್ಗೆ ಅವರ ಈ ಹೇಳಿಕೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸಿದೆ. ಇದು ಕೇವಲ ಪ್ರಧಾನಿ ಮೋದಿಯವರಿಗೆ ಮಾಡಿದ ಅವಮಾನವಲ್ಲ, ಇಡೀ ಭಾರತದ ಪ್ರಜಾಪ್ರಭುತ್ವಕ್ಕೆ ಮಾಡಿದ ಅವಮಾನ ಎಂದು ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು