Breaking News

ಮಲ್ಲಿಕಾರ್ಜುನ ಮುತ್ಯಾ ಕೇಸ್ ರದ್ದು ಮಾಡದಿದ್ದರೆ ‘ಯಾದಗಿರಿ ಬಂದ್’: ಜಿಲ್ಲಾಡಳಿತಕ್ಕೆ 2 ದಿನಗಳ ಗಡುವು ಕೊಟ್ಟ ಭಕ್ತರು!

ಯಾದಗಿರಿ: ಅಪ್ರಾಪ್ತ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಪೋಕ್ಸೋ (POCSO) ಪ್ರಕರಣ ಎದುರಿಸುತ್ತಿರುವ ವಿವಾದಿತ ‘ಪವಾಡ ಪುರುಷ’ ಮಲ್ಲಿಕಾರ್ಜುನ ಮುತ್ಯಾ ಅವರ ಪರವಾಗಿ ಈಗ ಭಕ್ತರು ಧರಣಿ ಆರಂಭಿಸಿದ್ದಾರೆ. ಮುತ್ಯಾ ವಿರುದ್ಧದ ಪ್ರಕರಣವನ್ನು ಕೂಡಲೇ ರದ್ದುಗೊಳಿಸದಿದ್ದರೆ ಇಡೀ ಯಾದಗಿರಿ ಜಿಲ್ಲೆಯನ್ನು ಬಂದ್ ಮಾಡುವುದಾಗಿ ಭಕ್ತರು ಎಚ್ಚರಿಕೆ ನೀಡಿದ್ದಾರೆ. ಮಲ್ಲಿಕಾರ್ಜುನ ಮುತ್ಯಾ ಅವರ ಶ್ರೀಮಠದಲ್ಲಿ ಇಂದು ನೂರಾರು ಭಕ್ತರು ಬೃಹತ್ ಸಭೆ ನಡೆಸಿದರು. ಈ ವೇಳೆ ಮಾತನಾಡಿದ ಭಕ್ತರು, “ಅಪ್ಪಾಜಿಯ ವಿರುದ್ಧ ದಾಖಲಾಗಿರುವ ಪ್ರಕರಣವು ಕಪೋಲಕಲ್ಪಿತ ಮತ್ತು ಅವರ ಹೆಸರನ್ನು ಹಾಳು ಮಾಡಲು ಮಾಡಿರುವ ಷಡ್ಯಂತ್ರ” ಎಂದು ಆಕ್ರೋಶ ಹೊರಹಾಕಿದರು.

ವೈರಲ್ ಆಗಿರುವ ವಿಡಿಯೋವನ್ನು ಎಡಿಟ್ ಮಾಡಿ ತಿರುಚಲಾಗಿದೆ. ಬಾಲಕಿಯ ಪೋಷಕರೇ ಇದು ಆಶೀರ್ವಾದದ ವಿಡಿಯೋ ಎಂದು ಸ್ಪಷ್ಟನೆ ನೀಡಿದ್ದರೂ ಮಕ್ಕಳ ಆಯೋಗದವರು ತರಾತುರಿಯಲ್ಲಿ ಕೇಸ್ ದಾಖಲಿಸಿರುವುದು ಸರಿಯಲ್ಲ ಎಂದು ಭಕ್ತರು ಕಿಡಿಕಾರಿದ್ದಾರೆ. ಈ ಪ್ರಕರಣವನ್ನು ನಿಭಾಯಿಸುವಲ್ಲಿ ಯಾದಗಿರಿ ಜಿಲ್ಲಾಧಿಕಾರಿ (DC) ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ವೈಫಲ್ಯ ಅನುಭವಿಸಿದ್ದಾರೆ ಎಂದು ಆರೋಪಿಸಲಾಗಿದೆ. ಬಾಲಕಿಯ ಮುಖ ತೋರಿಸಿ ವಿಡಿಯೋ ಬಹಿರಂಗಪಡಿಸಿದ ಮಕ್ಕಳ ಆಯೋಗದ ಸದಸ್ಯರೇ ಈ ಪ್ರಕರಣದಲ್ಲಿ ಮೊದಲ ಆರೋಪಿಯಾಗಬೇಕು ಎಂದು ಭಕ್ತರು ಒತ್ತಾಯಿಸಿದ್ದಾರೆ.

Advertisement

ಇದನ್ನೂ ಓದಿ: ಕಾಂಗ್ರೆಸ್​ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಮಂಜೂರು

ಮುತ್ಯಾ ವಿರುದ್ಧದ ಪೋಕ್ಸೋ ಪ್ರಕರಣವನ್ನು ಎರಡು ದಿನದೊಳಗೆ ರದ್ದುಗೊಳಿಸದಿದ್ದರೆ ಯಾದಗಿರಿ ಬಂದ್ ಮಾಡುವುದಾಗಿ ಮತ್ತು ಜಿಲ್ಲಾಡಳಿತ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸುವುದಾಗಿ ಗಡುವು ನೀಡಲಾಗಿದೆ. ಇತ್ತೀಚೆಗೆ ಮಲ್ಲಿಕಾರ್ಜುನ ಮುತ್ಯಾ ಅವರು ಅಪ್ರಾಪ್ತ ಬಾಲಕಿಯನ್ನು ಅಪ್ಪಿಕೊಂಡು ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗಿತ್ತು. ಇದರ ಆಧಾರದ ಮೇಲೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ದೂರಿನ ಮೇರೆಗೆ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿದ್ದರು. ಆದರೆ, ನಂತರ ಬಾಲಕಿಯ ಪೋಷಕರು ವಿಡಿಯೋ ಬಿಡುಗಡೆ ಮಾಡಿ “ಮುತ್ಯಾ ಅವರು ಆಶೀರ್ವಾದ ಮಾಡುತ್ತಿದ್ದರು, ಅಶ್ಲೀಲವಾಗಿ ವರ್ತಿಸಿಲ್ಲ” ಎಂದು ಹೇಳಿಕೆ ನೀಡುವ ಮೂಲಕ ಪ್ರಕರಣಕ್ಕೆ ಹೊಸ ತಿರುವು ನೀಡಿದ್ದರು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು