ಪುತ್ತೂರು: ವ್ಯಕ್ತಿಯೊಬ್ಬರು ನ್ಯಾಯಾಲಯದ ಆವರಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದವರು ಕಾವು ನಿವಾಸಿ ರವಿ ಎಂದು ಗುರುತಿಸಲಾಗಿದ್ದು, ಕೂಡಲೇ ಅವರನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಇದನ್ನೂ ಓದಿ: Shocking: ವಿದ್ಯಾರ್ಥಿಗಳ ಆತ್ಮಹತ್ಯೆ, ಕಾನ್ಪುರ ಐಐಟಿ ಪ್ರಥಮ

ನ್ಯಾಯಾಲಯದಲ್ಲಿ ಪ್ರಕರಣ ವಿಚಾರಣೆ ನಡೆಯುತ್ತಿರುವಾಗ ಕೋರ್ಟ್ ಒಳಗೆ ನುಗ್ಗಿದ ರವಿ, ತಂದ ಒಂದು ಬಾಟಲ್ ವಿಷದಲ್ಲಿ ಅರ್ಧ ವಿಷ ಸೇವಿಸಿದ್ದು, ಕ್ಷಣಾರ್ಧದಲ್ಲೇ ಕುಸಿದು ಬಿದ್ದಿದ್ದಾರೆ. ಅದರೆ, ಯಾವ ಕಾರಣಕ್ಕೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿಲ್ಲ. ಪೊಲೀಸ್ ತನಿಖೆ ನಂತರಷ್ಟೇ ಕಾರಣ ತಿಳಿದುಬರಲಿದೆ. ವ್ಯಕ್ತಿಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.
ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್: 7353833811, ಇ-ಮೇಲ್- g1newsdpt@gmail.com

