Breaking News

ಮಂಡ್ಯ: ಟ್ರ್ಯಾಕ್ಟರ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ; ಚಾಲಕ ಸ್ಥಳದಲ್ಲೇ ದಾರುಣ ಸಾವು

ಮಂಡ್ಯ: ಕಬ್ಬಿಣದ ಸರಳುಗಳನ್ನು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್‌ಗೆ ಕೆಎಸ್‌ಆರ್‌ಟಿಸಿ (KSRTC) ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ, ಬಸ್ ಚಾಲಕ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ದೂಘಟನೆ ಮಂಡ್ಯ ಸಮೀಪದ ವರಾಹಸಂದ್ರ ಬಳಿ ನಡೆದಿದೆ.

ಸೆಪ್ಟೆಂಬರ್ 9 ರಂದು ಮಧ್ಯಾಹ್ನ ಸುಮಾರು 12:30 ರ ವೇಳೆಗೆ ಈ ಭೀಕರ ಅಪಘಾತ ಸಂಭವಿಸಿದೆ. ಕಬ್ಬಿಣದ ಸರಳುಗಳನ್ನು (Iron bars) ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ಚಾಲಕ ದಿಢೀರನೆ ಬ್ರೇಕ್ ಹಾಕಿದ್ದಾನೆ. ಈ ವೇಳೆ ಹಿಂಬದಿಯಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ, ಚಾಲಕನ ಭಾಗವೇ ನೇರವಾಗಿ ಟ್ರ್ಯಾಕ್ಟರ್‌ಗೆ ರಭಸವಾಗಿ ಡಿಕ್ಕಿಯಾಗಿದೆ.

ಇದನ್ನೂ ಓದಿ: ಮಗುವಿನ ಕತ್ತು ಹಿಸುಕಿ ಗಂಡ ಹೆಂಡತಿ ಆತ್ಯಹತ್ಯೆ: ಅದೃಷ್ಟವಶಾತ್ ಪಾರಾದ 2 ವರ್ಷ ಕೂಸು

ಡಿಕ್ಕಿಯ ರಭಸಕ್ಕೆ ಬಸ್ಸಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಬಸ್ ಚಾಲಕ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಮೃತ ಚಾಲಕರನ್ನು ಹಾಸನ ಜಿಲ್ಲೆಯ ಹೊಳೆನರಸೀಪುರ ಡಿಪೋಗೆ ಸೇರಿದ ಶೇಖರ್ ಎಂ.ಡಿ. (Shekar MD) ಎಂದು ಗುರುತಿಸಲಾಗಿದೆ.🚔 ಸ್ಥಳಕ್ಕೆ ಪೊಲೀಸರ ಭೇಟಿಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *