ಭಾಗ್ಯಶ್ರೀ ಆರ್. ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕಿ ಭಾಗ್ಯಶ್ರೀ ಆರ್. ಅವರು ಡಾಕ್ಟರೇಟ್ ಪದವಿ ಪಡೆದಿದ್ದಾರೆ.

ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಪ್ರೊ. ಪ್ರೀತಿ ಕೀರ್ತಿ ಡಿಸೋಜ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “ಎನ್ ಎಂಪಿರಿಕಲ್ ಸ್ಟಡಿ ಆಫ್ ಲೈವಿಲಿವುಡ್ ಪ್ಯಾಟರ್ನ್ ಆಫ್ ಸಿವಿಕ್ ಎಂಪ್ಲಾಯಿಸ್ ಎಂಗೇಜ್ಡ್ ಇನ್ ಸಾಲಿಡ್ ವೇಸ್ಟ್ ಮ್ಯಾನೇಜ್ಮೆಂಟ್ ಇನ್ ದಕ್ಷಿಣ ಕನ್ನಡ ಡಿಸ್ಟ್ರಿಕ್ಟ್” (An empirical study of livelihood pattern of civic employees engaged in solid waste management in Dakshina Kannada district) ಎಂಬ ವಿಷಯದ ಕುರಿತಾಗಿ ಮಂಡಿಸಿದ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯವು ಪಿ ಎಚ್ ಡಿ ಪದವಿ ನೀಡಿ ಗೌರವಿಸಿದೆ.

ಇವರು ಯನಿವರ್ಸಿಟಿ ಗ್ರ್ಯಾಂಟ್ಸ್ ಕಮಿಷನ್ ಅಡಿಯಲ್ಲಿ ನೀಡಲಾಗುವ ಯುಜಿಸಿ ನೆಟ್ ಜೆ ಆರ್ ಎಫ್ (UGC- NET- JRF) ಯೋಜನೆಡಿಯಲ್ಲಿ ಪಿ ಹೆಚ್ ಡಿ ಮಾಡಿರುತ್ತಾರೆ.

ಇದನ್ನೂ ಓದಿ: ಕಲ್ಲಡ್ಕ ಶ್ರೀ ರಾಮ ಪದವಿಪೂರ್ವ ಕಾಲೇಜಿನಲ್ಲಿ ದೀಪಪ್ರದಾನ ಕಾರ್ಯಕ್ರಮ

ಇವರು ಆಲೆಟ್ಟಿ ಗ್ರಾಮ ರಂಗತ್ತಮಲೆ ನಿವಾಸಿ ಆರ್. ಎಲ್. ಜನಾರ್ಧನ ಹಾಗೂ ಲೀಲಾವತಿ ದಂಪತಿಯ ಪುತ್ರಿ ಹಾಗೂ ಕಾಸರಗೋಡಿನ ಕರೋಡಿ, ಹೊಸಗದ್ದೆ ಮೂಲೆ ಸತ್ಯನಾರಾಯಣ ಪ್ರಸಾದ್ ಕಾಮತ್ ರವರ ಪತ್ನಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು