ಮಂಗಳೂರು: ಅಶ್ಲೀಲ ವಿಡಿಯೋ ತೋರಿಸಿ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ! ಆರೋಪಿ ಅರೆಸ್ಟ್

mangaluru-child-abuse-case-konaje-police-arrest-ashish-poojary-pocso-case

ಮಂಗಳೂರು: ಒಂಬತ್ತು ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ 33 ವರ್ಷದ ವ್ಯಕ್ತಿಯನ್ನು ಕೋಣಾಜೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಆಶಿಷ್ ಪೂಜಾರಿ (33) ಎಂದು ಗುರುತಿಸಲಾಗಿದೆ. ಬೆಜೈಯಲ್ಲಿರುವ ಎಂಎಸ್‌ಸಿ ಲಾಜಿಸ್ಟಿಕ್ಸ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾನೆ. ಘಟನೆಗೆ ಸಂಬಂಧಿಸಿ ಬಾಲಕನ ಕುಟುಂಬಸ್ಥರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ: ಮಂಗಳೂರು: 2 ಕೋಟಿ ಭೂಮಿಗಾಗಿ ಉದ್ಯಮಿಯ ಮೇಲೆ ಕಾರು ಹರಿಸಿ ಕೊಲೆಗೆ ಯತ್ನ

ಪೊಲೀಸ್ ಮಾಹಿತಿಯ ಪ್ರಕಾರ, ಆರೋಪಿ ಬಾಲಕನಿಗೆ ಹಣ ಮತ್ತು ತಿಂಡಿ ಆಮಿಷ ನೀಡಿ ಏಕಾಂಗಿ ಸ್ಥಳಕ್ಕೆ ಕರೆದುಕೊಂಡು ಹೋಗಿ ದೌರ್ಜನ್ಯ ಎಸಗಿದ್ದಾನೆ. ಅಲ್ಲದೆ, ತನ್ನ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋಗಳನ್ನು ತೋರಿಸಿ ಅಸಭ್ಯ ಕೃತ್ಯಕ್ಕೆ ಪ್ರೇರೇಪಿಸಿದ್ದಾನೆ ಎಂಬ ಆರೋಪವೂ ಕೇಳಿಬಂದಿದೆ.

ಈ ಸಂಬಂಧ ಕೋಣಾಜೆ ಪೊಲೀಸರು POCSO ಕಾಯ್ದೆಯ ಸೆಕ್ಷನ್ 4, 6, 12 ಹಾಗೂ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 75ರ ಅಡಿಯಲ್ಲಿ ಪ್ರಕರಣ ದಾಖಲಿಸಿ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನಂತರ ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಪ್ರಕರಣದ ಗಂಭೀರತೆಯನ್ನು ಗಮನಿಸಿ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದು, ಇನ್ನಿತರ ಮೇಲೂ ಇಂತಹ ಕೃತ್ಯ ಎಸಗಿರುವ ಸಾಧ್ಯತೆಯ ಬಗ್ಗೆ ಪರಿಶೀಲಿಸುತ್ತಿದ್ದಾರೆ. ಕಾನೂನು ನಿಯಮಾನುಸಾರ ಬಾಲಕನ ಗುರುತು ಸಂಪೂರ್ಣವಾಗಿ ಗೌಪ್ಯವಾಗಿರಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ