ಮಂಗಳೂರು: ನವೆಂಬರ್ 19, 2022 ರಂದು ಮಂಗಳೂರಿನ ಕಂಕನಾಡಿ ಬಳಿ ಆಟೋರಿಕ್ಷಾದಲ್ಲಿ ಸಾಗಿಸುತ್ತಿದ್ದ ಕುಕ್ಕರ್ ಐಇಡಿ (IED) ಸ್ಫೋಟಗೊಂಡಿತ್ತು. ಈ ಪ್ರಕರಣದ ವಿಚಾರಣೆ ನಡೆಸುತ್ತಿರುವ ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯವು ಏಪ್ರಿಲ್ 17, 2026 ರಂದು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಿದೆ.
ಮೂರು ತಿಂಗಳ ಹಿಂದೆ ಶಾರಿಕ್ ಸಲ್ಲಿಸಿದ್ದ ತನ್ನ ತಪ್ಪುಗಳನ್ನು ಒಪ್ಪಿಕೊಳ್ಳುವ (Guilty Plea) ಅರ್ಜಿಯನ್ನು ನ್ಯಾಯಾಧೀಶರು ಪುರಸ್ಕರಿಸಿದ್ದಾರೆ. 2024ರಲ್ಲಿ ಎನ್‌ಐಎ ಅಧಿಕಾರಿಗಳು ಶಾರಿಕ್ ವಿರುದ್ಧ ಸುದೀರ್ಘ ಆರೋಪಪಟ್ಟಿ (Charge sheet) ಸಲ್ಲಿಸಿದ್ದರು. ಸ್ಫೋಟದಲ್ಲಿ ಸ್ವತಃ ಶಾರಿಕ್ ಹಾಗೂ ಆಟೋ ಚಾಲಕ ಪುರುಷೋತ್ತಮ್ ಪೂಜಾರಿ ಗಾಯಗೊಂಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


