ಮಂಗಳೂರು: ಅತ್ತಾವರದಲ್ಲಿ ಭಾರಿ ಮಳೆಗೆ ಕುಸಿದ ಕಾಂಪೌಂಡ್ ವಾಲ್; ನಾಲ್ಕು ಕಾರುಗಳು ಜಖಂ!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ನಿನ್ನೆ ತಡರಾತ್ರಿ ಗುಡುಗು, ಗಾಳಿ ಸಹಿತ ಭಾರಿ ಮಳೆಯಾಗಿದ್ದು, ನಗರದ ಅತ್ತಾವರ ಭಾಗದಲ್ಲಿ ಮಳೆಯ ಅಬ್ಬರಕ್ಕೆ ಕಾಂಪೌಂಡ್ ವಾಲ್ ಕುಸಿದು ಬಿದ್ದಿದೆ. ಪರಿಣಾಮವಾಗಿ ಪಕ್ಕದಲ್ಲೇ ನಿಲ್ಲಿಸಲಾಗಿದ್ದ ನಾಲ್ಕು ಕಾರುಗಳು ಜಖಂಗೊಂಡಿವೆ.

ಕಳೆದ ಕೆಲವು ದಿನಗಳಿಂದ ದಕ್ಷಿಣ ಕನ್ನಡದಲ್ಲಿ ಬಿಸಿಲಿನ ತಾಪ ಹೆಚ್ಚಾಗಿತ್ತು, ಆದರೆ ನಿನ್ನೆ ರಾತ್ರಿ ಹಠಾತ್ ಆಗಿ ಗಾಳಿ ಸಹಿತ ಬಿರುಸಿನ ಮಳೆ ಸುರಿದಿದೆ. ಮಳೆಯ ತೀವ್ರತೆಗೆ ಎತ್ತರದ ಕಾಂಪೌಂಡ್ ಗೋಡೆಯೊಂದು ಕುಸಿದು ಬಿದ್ದಿದೆ. ಈ ಗೋಡೆಯ ಪಕ್ಕದಲ್ಲೇ ನಿಲ್ಲಿಸಲಾಗಿದ್ದ ನಾಲ್ಕು ಕಾರುಗಳ ಮೇಲೆ ಕಾಂಪೌಂಡ್ ಇಟ್ಟಿಗೆ ಮತ್ತು ಮಣ್ಣು ಬಿದ್ದಿದೆ. ಗೋಡೆ ಕುಸಿದ ರಭಸಕ್ಕೆ ನಾಲ್ಕು ಕಾರುಗಳು ಭಾಗಶಃ ಜಖಂಗೊಂಡಿವೆ. ಅದೃಷ್ಟವಶಾತ್ ಘಟನೆ ತಡರಾತ್ರಿ ನಡೆದಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Advertisement

ಇದನ್ನೂ ಓದಿ: ಮಂಗಳೂರಿನಲ್ಲಿ ಸಂಸದ ಕ್ಯಾ. ಚೌಟ ಅವರನ್ನು ಭೇಟಿ ಮಾಡಿದ ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್‌ಗೀಚಿ

ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮಂಗಳೂರು ಸೇರಿದಂತೆ ಕರಾವಳಿಯಾದ್ಯಂತ ಮಳೆಯ ಸಿಂಚನವಾಗಿದ್ದು, ಬಿಸಿಲಿನ ಧಗೆಯಿಂದ ಬೆಂದಿದ್ದ ಜನರಿಗೆ ತಂಪು ನೀಡಿದೆ. ಆದರೆ, ನಗರದ ಹಲವೆಡೆ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿರುವ ವರದಿಯಾಗಿದೆ.

Advertisement

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು