ಮಂಗಳೂರು: ಕರಾವಳಿಯ ಪ್ರಮುಖ ವಾಣಿಜ್ಯ ಕೇಂದ್ರವಾದ ಮಂಗಳೂರು ನಗರದ ಸ್ಟೇಟ್ ಬ್ಯಾಂಕ್ (State Bank) ಬಸ್ ನಿಲ್ದಾಣದ ಬಳಿ ಸಾರ್ವಜನಿಕವಾಗಿ ವ್ಯಕ್ತಿಯೊಬ್ಬ ನಡುರಸ್ತೆಯಲ್ಲೇ ಬೀದಿ ರಂಪಾಟ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಕಿರಿಕ್, ಪಾದಚಾರಿಗಳು ಹಾಗೂ ಅಂಗಡಿ ಮಾಲೀಕರ ನಡುವೆ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿ ತೀವ್ರ ಉದ್ವಿಗ್ನತೆ ಸೃಷ್ಟಿಸಿತ್ತು.
ನಗರದ ಅತ್ಯಂತ ಜನದಟ್ಟಣೆಯ ಪ್ರದೇಶವಾದ ಸ್ಟೇಟ್ ಬ್ಯಾಂಕ್ ಬಳಿ ಬಂದಿದ್ದ ಅಪರಿಚಿತ ವ್ಯಕ್ತಿಯೊಬ್ಬ ಜೋರಾಗಿ ಕೂಗಾಡುತ್ತಾ ಅಲ್ಲಿನ ಸ್ಥಳೀಯ ಅಂಗಡಿ ಮಾಲೀಕರು ಹಾಗೂ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗಳ ಜೊತೆ ವಿನಾಕಾರಣ ಕಿರಿಕ್ ತೆಗೆದಿದ್ದಾನೆ. ಈ ವೇಳೆ ಅಲ್ಲಿಗೆ ಬಂದ ಪಾದಚಾರಿಯೊಬ್ಬ ವ್ಯಕ್ತಿಯ ವರ್ತನೆಯನ್ನು ಪ್ರಶ್ನಿಸಿದ್ದಕ್ಕೆ ಇಬ್ಬರ ನಡುವೆ ತೀವ್ರ ವಾಗ್ವಾದ ನಡೆದಿದೆ. ಜಗಳ ವಿಕೋಪಕ್ಕೆ ತಿರುಗುತ್ತಿದ್ದಂತೆ ಇಬ್ಬರೂ ಸಾರ್ವಜನಿಕ ಫುಟ್‌ಪಾತ್‌ನಲ್ಲೇ ಎದ್ದುಬಿದ್ದು ಪರಸ್ಪರ ಮನಸ್ಸೋಇಚ್ಛೆ ಹೊಡೆದಾಡಿಕೊಂಡಿದ್ದಾರೆ.
ಇಲ್ಲಿದೆ ನೋಡಿ ವಿಡಿಯೋ
ನಡುರಸ್ತೆಯಲ್ಲೇ ನಡೆದ ಈ ಹೈಡ್ರಾಮಾವನ್ನು ಕಂಡು ಸ್ಥಳದಲ್ಲಿದ್ದ ಸಾರ್ವಜನಿಕರು ಹಾಗೂ ಪ್ರಯಾಣಿಕರು ಕೆಲಕಾಲ ದಿಗ್ಭ್ರಮೆಗೊಂಡಿದ್ದರು. ಇಡೀ ಹೊಡೆದಾಟದ ಭೀಕರ ದೃಶ್ಯಗಳನ್ನು ಸ್ಥಳೀಯರು ಹಾಗೂ ಪಾದಚಾರಿಗಳು ತಮ್ಮ ಮೊಬೈಲ್ ಕ್ಯಾಮೆರಾಗಳಲ್ಲಿ ಲೈವ್ ಆಗಿ ಸೆರೆಹಿಡಿದುಕೊಂಡಿದ್ದಾರೆ. ಸದ್ಯ ಈ ವಿಡಿಯೋ ಮಂಗಳೂರಿನ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ಸಾರ್ವಜನಿಕ ಶಾಂತಿಗೆ ಭಂಗ ತಂದಿರುವ ಇಂತಹ ವ್ಯಕ್ತಿಗಳ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


