ಚಲಿಸುತ್ತಿದ್ದ ಕಾರಿನ ಮೇಲೆ ಉರುಳಿಬಿದ್ದ ಮರ, ವಿದ್ಯುತ್ ಕಂಬ; ವೈದ್ಯರು ಪಾರು!

ಕಾಸರಗೋಡು: ಜಿಲ್ಲೆಯಲ್ಲಿ ಬೀಸುತ್ತಿರುವ ಬಿರುಗಾಳಿ ಸಹಿತ ಅಕಾಲಿಕ ಮಳೆಗೆ ಪೆರ್ಲ ಸಮೀಪ ಭೀಕರ ಅಪಘಾತ ಸಂಭವಿಸಿದ್ದು, ಸೀತಂಗೋಲಿ ಮತ್ತು ಬದೂರುಪದವಿನಲ್ಲಿ ಕ್ಲಿನಿಕ್ ನಡೆಸುತ್ತಿರುವ ವೈದ್ಯರೊಬ್ಬರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಂಗಳವಾರ (ಮೇ 12) ಸಂಜೆ ಬದೂರು-ಪೆರ್ಲ ರಸ್ತೆಯ ಮಣಿಯಂಪಾರೆ ಮಸೀದಿ ಬಳಿ ಈ ಘಟನೆ ನಡೆದಿದೆ. ಪೆರ್ಲ ಮೂಲದ ವೈದ್ಯರು ತಮ್ಮ ಕಾರಿನಲ್ಲಿ ಸಂಚರಿಸುತ್ತಿದ್ದಾಗ, ದಿಢೀರನೆ ಬೀಸಿದ ಗಾಳಿ ಮಳೆಗೆ ರಸ್ತೆ ಬದಿಯ ಬೃಹತ್ ಮರವೊಂದು ವಿದ್ಯುತ್ ಕಂಬದ ಸಮೇತ ಚಲಿಸುತ್ತಿದ್ದ ಕಾರಿನ ಮೇಲೆ ಉರುಳಿ ಬಿದ್ದಿದೆ.

ಇದನ್ನೂ ಓದಿ: Accident : ಕಾರು-ಟ್ರಕ್ ಭೀಕರ ಅಪಘಾತದಲ್ಲಿ ಮಾಜಿ ಗೃಹ ಸಚಿವರ ಪುತ್ರಿ ಸೇರಿ ಮೂವರ ದುರ್ಮರಣ

ಮರ ಮತ್ತು ಕಂಬ ಉರುಳಿದ ರಭಸಕ್ಕೆ ಕಾರು ಸಂಪೂರ್ಣ ಜಜ್ಜಲ್ಪಟ್ಟಿದ್ದರೂ, ಅದೃಷ್ಟವಶಾತ್ ವೈದ್ಯರು ಯಾವುದೇ ಗಂಭೀರ ಗಾಯಗಳಿಲ್ಲದೆ ಪವಾಡ ಸದೃಶವಾಗಿ ಪಾರಾಗಿದ್ದಾರೆ. ಘಟನೆಯಿಂದಾಗಿ ಈ ಮಾರ್ಗದಲ್ಲಿ ಕೆಲಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಅಕಾಲಿಕ ಮಳೆಯ ಅಬ್ಬರಕ್ಕೆ ಕಾಸರಗೋಡು ಜಿಲ್ಲೆಯ ಹಲವೆಡೆ ಮರಗಳು ಉರುಳಿ ಸಾವು-ನೋವುಗಳು ಸಂಭವಿಸುತ್ತಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು