ಮೊನಾಲಿಸಾ ಮದುವೆ ವಿವಾದಕ್ಕೆ ಬಿಗ್ ಟ್ವಿಸ್ಟ್: ಗಂಡ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್ ದಾಖಲು!

ಬೆಂಗಳೂರು: ಕುಂಭಮೇಳದ ಸಮಯದಲ್ಲಿ ತನ್ನ ವಿಶಿಷ್ಟ ರೂಪದಿಂದ ವೈರಲ್ ಆಗಿದ್ದ ಮೊನಾಲಿಸಾ ಭೋಸ್ಲೆ ಮತ್ತು ಫರ್ಮಾನ್ ಖಾನ್ ಅವರ ವಿವಾಹ ಪ್ರಕರಣ ಈಗ ಗಂಭೀರ ತಿರುವು ಪಡೆದುಕೊಂಡಿದೆ. ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ (NCST) ನಡೆಸಿದ ತನಿಖೆಯಲ್ಲಿ ಮೊನಾಲಿಸಾ ಇನ್ನೂ ಅಪ್ರಾಪ್ತ ಬಾಲಕಿ ಎಂಬುದು ದೃಢಪಟ್ಟಿದೆ.

ಮಾರ್ಚ್ 11 ರಂದು ಕೇರಳದ ತಿರುವನಂತಪುರದ ದೇವಾಲಯವೊಂದರಲ್ಲಿ ಉತ್ತರ ಪ್ರದೇಶದ ಫರ್ಮಾನ್ ಖಾನ್ ಜೊತೆ ಮೊನಾಲಿಸಾ ವಿವಾಹ ನಡೆದಿತ್ತು. ಆಗ ನೀಡಿದ್ದ ಆಧಾರ್ ಕಾರ್ಡ್‌ನಲ್ಲಿ 18 ವರ್ಷ ಎಂದು ನಮೂದಿಸಲಾಗಿತ್ತು. ಆದರೆ, ಆಸ್ಪತ್ರೆಯ ದಾಖಲೆಗಳ ಪ್ರಕಾರ ಆಕೆ ಡಿಸೆಂಬರ್ 30, 2009 ರಂದು ಜನಿಸಿದ್ದು, ಮದುವೆಯ ಸಮಯದಲ್ಲಿ ಆಕೆಗೆ ಕೇವಲ 16 ವರ್ಷ 2 ತಿಂಗಳು ವಯಸ್ಸಾಗಿತ್ತು.

ಇದನ್ನೂ ಓದಿ: ರಾಘವ್‌ ಛಡ್ಡಾ ಬೆಂಬಲಕ್ಕೆ ನಿಂತ ನಟಿ ಪ್ರಿಯಾಂಕಾ ಚೋಪ್ರಾ! ದಿಶಾ ಪಟಾನಿ ಸಹೋದರಿಯಿಂದಲೂ ಬೆಂಬಲ

ಆಕೆ ಅಪ್ರಾಪ್ತೆ ಎಂದು ಸಾಬೀತಾದ ಹಿನ್ನೆಲೆಯಲ್ಲಿ, ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ (POCSO) ಕಾಯ್ದೆ ಹಾಗೂ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.ಮೊನಾಲಿಸಾಳನ್ನು ಬಲವಂತವಾಗಿ ಮತಾಂತರಿಸಿ ಮದುವೆ ಮಾಡಲಾಗಿದೆ ಎಂದು ಆಕೆಯ ತಂದೆ ಜೈ ಸಿಂಗ್ ಭೋಸ್ಲೆ ದೂರಿದ್ದರು. ನಿರ್ದೇಶಕ ಸನೋಜ್ ಮಿಶ್ರಾ ಕೂಡ ಇದನ್ನು ‘ಲವ್ ಜಿಹಾದ್’ ಎಂದು ಆರೋಪಿಸಿದ್ದಾರೆ. ನಕಲಿ ದಾಖಲೆಗಳ ಬಳಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಆಯೋಗವು, ಕೇರಳ ಮತ್ತು ಮಧ್ಯಪ್ರದೇಶದ ಪೊಲೀಸ್ ಮಹಾನಿರ್ದೇಶಕರಿಗೆ ವರದಿ ಸಲ್ಲಿಸುವಂತೆ ಸೂಚಿಸಿದೆ.

ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು