ಬಂಟ್ವಾಳ: ತಾಲೂಕಿನ ಮಂಚಿ ಗ್ರಾಮದ ಮೋಂತಿಮಾರಿನ ಶಬರಿಗಿರಿಯಲ್ಲಿರುವ ಅಯ್ಯಪ್ಪ ಭಕ್ತ ವೃಂದದ 45ನೇ ವಾರ್ಷಿಕೋತ್ಸವ, ಸಾರ್ವಜನಿಕ ಸತ್ಯನಾರಾಯಣ ಪೂಜೆ ಹಾಗೂ ಅಯ್ಯಪ್ಪ ಮಾಲಾಧಾರಿಗಳ ಇರುಮುಡಿ ಕಟ್ಟುವ ಕಾರ್ಯಕ್ರಮ ಜ.11 ರಂದು ಮೋಂತಿಮಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆಯಲಿದೆ.
ಬೆಳಗ್ಗೆ 6 ಗಂಟೆಗೆ ದೇವತಾ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭಗೊಳ್ಳಲಿದ್ದು, ಇದೇ ವೇಳೆ ಭಜನಾ ಕಾರ್ಯಕ್ರಮವೂ ಆರಂಭಗೊಳ್ಳಲಿದೆ. ಬೆಳಗ್ಗೆ 9 ಗಂಟೆಯಿಂದ ಗುರುಸ್ವಾಮಿ ಉಮೇಶ್ ನಾಯಕ್ ನೇತೃತ್ವದಲ್ಲಿ ಅಯ್ಯಪ್ಪ ಮಾಲಾಧಾರಿಗಳ ಇರುಮುಡಿ ಕಟ್ಟುವ ಕಟ್ಟುವ ಕಾರ್ಯಕ್ರಮ ನಡೆಯಲಿದೆ.

ಇದನ್ನೂ ಓದಿ : Udupi : ಉಡುಪಿ ಪರ್ಯಾಯೋತ್ಸವ ಕುರಿತು ದ್ವೇಷಪೂರ್ಣ ಪೋಸ್ಟ್ : ಪ್ರಕರಣ ದಾಖಲು
ಮಧ್ಯಾಹ್ನ 12ಕ್ಕೆ ಶ್ರೀ ದೇವಿಗೆ ವಿಶೇಷ ಹೂವಿನ ಪೂಜೆ ಹಾಗೂ ಮಹಾಮಂಗಳಾರತಿ ನಡೆದು ಪ್ರಸಾದ ವಿತರಣೆ ನಡೆಯಲಿದೆ. 12:30 ಕ್ಕೆ ಶಬರಿಗಿಯಲ್ಲಿ ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ಬಳಿಕ ಅನ್ನಸಂತರ್ಪಣೆಯೂ ನಡೆಯಲಿದೆ.
ಸತ್ಯನಾರಾಯಣ ಪೂಜೆ ಮಾಡಿಸಲು ಇಚ್ಚಿಸುವವರಿಗೆ 100 ರೂ. ಶುಲ್ಕ ನಿಗದಿಪಡಿಸಲಾಗಿದೆ. ಭಕ್ತಾಭಿಮಾನಿಗಳು ಹೂವು, ಹಣ್ಣು, ಅಕ್ಕಿ ಮತ್ತಿತರ ಹಸಿರುವಾಣಿತನ್ನು ಅರ್ಪಿಸಬಹುದಾಗಿದೆ ಎಂದು ಅಯ್ಯಪ್ಪ ಭಕ್ತ ವೃಂದ ಪ್ರಕಟಣೆಯಲ್ಲಿ ತಿಳಿಸಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್: 7353833811, ಇ-ಮೇಲ್- g1newsdpt@gmail.com

