ಬಂಟ್ವಾಳ: ತಾಲೂಕಿನ ಮಂಚಿ ಗ್ರಾಮದ ಮೋಂತಿಮಾರಿನಲ್ಲಿ ಭಾನುವಾರ ಸುರಿದ ಸಿಡಿಲು ಸಹಿತ ಭಾರಿ ಗಾಳಿ-ಮಳೆಯಿಂದ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಹಾನಿಯಾಗಿದೆ.
ಮೇ 31 ರಂದು ಮಧ್ಯಾಹ್ನ ಸುಮಾರು 2.45 ರಿಂದ 3 ಗಂಟೆಯ ಅವಧಿಯಲ್ಲಿ ಸುರಿದ ಭಾರೀ ಗಾಳಿ ಮತ್ತು ಮಳೆಯಿಂದ ದೇವಸ್ಥಾನದ ಸಮೀಪದಲ್ಲಿದ್ದ ತೆಂಗಿನ ಮರವು ಉರುಳಿ ದೇವಸ್ಥಾನದ ಮುಂಭಾಗದ ಅಂಗಣಕ್ಕೆ ಅಳವಡಿಸಲಾಗಿದ್ದ ಶೀಟ್ ಮೇಲಕ್ಕೆ ಬಿದ್ದಿದೆ. ಪರಿಣಾಮವಾಗಿ ಸಿಮೆಂಟ್ ಶೀಟ್‌ಗಳು ಹಾನಿಗೊಳಗಾಗಿವೆ.
ಇದನ್ನೂ ಓದಿ: ಬಂಟ್ವಾಳ: ಪ್ರಸಿದ್ಧ ಕಾರಿಂಜೇಶ್ವರ ದೇವಾಲಯ ಸಹಿತ ಎರಡು ದೇವಾಲಯಗಳಿಗೆ ಬಡಿದ ಸಿಡಿಲು, ಹಾನಿ
ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ ಉರುಳಿದ ತೆಂಗಿನ ಮರವನ್ನು ತೆರವುಗೊಳಿಸಿದರು. ಮಂಚಿ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾನುವಾರ ಸುರಿದ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


