ಮೂಡುಬಿದಿರೆ: ರಾಷ್ಟ್ರೀಯ ಹೆದ್ದಾರಿಯ ಬನ್ನಡ್ಕ ಸಮೀಪ ಖಾಸಗಿ ಬಸ್ ಪಲ್ಟಿಯಾಗಿ ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್‌ನ ಹಿಂಬದಿ ಸವಾರ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಮೂಡುಮಾರ್ನಾಡು ಗ್ರಾಮದ ಗೀತಾ (54) ಎಂದು ಗುರುತಿಸಲಾಗಿದೆ. ಅವರು ಮುಂಬೈಯಲ್ಲಿ ನೆಲೆಸಿದ್ದು, ರಜೆ ನಿಮಿತ್ತ ಊರಿಗೆ ಬಂದಿದ್ದರು ಎನ್ನಲಾಗಿದೆ.
ಇದನ್ನೂ ಓದಿ: ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ
ಕಾರ್ಕಳದಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಬನ್ನಡ್ಕದ ಸೋನ್ಸ್ ಫಾರ್ಮ್ ಸಮೀಪ ಪಲ್ಟಿಯಾದ ವೇಳೆ ರಸ್ತೆ ಬದಿಯಲ್ಲಿ ಸಾಗುತ್ತಿದ್ದ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಸ್ಕೂಟರ್ ಸಂಪೂರ್ಣ ಜಖಂಗೊಂಡಿದೆ.
ಅಪಘಾತದಲ್ಲಿ ಗೀತಾ ಅವರಿಗೆ ತಲೆ ಮತ್ತು ಕಾಲಿಗೆ ಗಂಭೀರ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ. ಸ್ಕೂಟರ್ ಚಾಲಕರಿಗೂ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
ಇದೇ ಅಪಘಾತದಲ್ಲಿ ಬಸ್‌ನಲ್ಲಿದ್ದ ಸುಮಾರು 16 ಪ್ರಯಾಣಿಕರೂ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.


