Breaking News

Shocking: ಅತ್ತೆಯಿಂದ ವೇಶ್ಯಾವಾಟಿಕೆಗೆ ಒತ್ತಾಯ, ಹಸುಗೂಸು ಬಿಟ್ಟು ಯುವತಿ ಆತ್ಮಹತ್ಯೆ

Triple murder case in Vijayanagar: 24-year-old accused arrested

ಬೀದ‌ರ್: ವೇಶ್ಯಾವಾಟಿಕೆಗೆ ಅತ್ತೆಯಿಂದ ಒತ್ತಾಯ ಆರೋಪ ಹಿನ್ನೆಲೆ 11 ತಿಂಗಳ ಮಗು ಬಿಟ್ಟು ಗೃಹಿಣಿಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣದ ಓಂ ಬಡಾವಣೆಯಲ್ಲಿ ನಡೆದಿದೆ.

ಅಂಜನಾಬಾಯಿ ಶೇಖರ್ ಪಾಟೀಲ್(22) ಮೃತ ಯುವತಿ. 2022ರಲ್ಲಿ ಬಸವಕಲ್ಯಾಣದ ಶೇಖರ್ ಪಾಟೀಲ್ ಜತೆ ಅಂಜನಾಬಾಯಿ ವಿವಾಹ ನಡೆದಿದ್ದು, ಮದುವೆ ಬಳಿಕ ವೇಶ್ಯಾವಾಟಿಕೆ ಮಾಡುವಂತೆ ಒತ್ತಾಯಿಸಿ ಯುವತಿಗೆ ನಿತ್ಯವೂ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ.

Advertisement

ಇದನ್ನೂ ಓದಿ: T20 Worldcup: ಗೆಲುವಿನ ಮೂಲಕ ವಿಶ್ವಕಪ್ ಅಭಿಯಾನ ಆರಂಭಿಸಿದ ದಕ್ಷಿಣ ಆಫ್ರಿಕಾ

ಅಂಜನಾಬಾಯಿ ಪತಿ ಶೇಖರ್ ಪಾನಿಪುರಿ ವ್ಯಾಪಾರ ಮಾಡಿಕೊಂಡಿದ್ದ ಎನ್ನಲಾಗಿದ್ದು, ನಿತ್ಯವೂ ರಾತ್ರಿ 11-12 ಗಂಟೆ ಅವಧಿಯಲ್ಲಿ ಮನೆಗೆ ಬರುತ್ತಿದ್ದ. ಈ ಬಗ್ಗೆ ತಕರಾರು ಮಾಡಿದ್ದ ಅಂಜನಾಬಾಯಿ ಬೇಗ ಮನೆಗೆ ಬನ್ನಿ ಎಂದಿದ್ದಳು. ಆದರೆ ಇದೇ ವಿಚಾರವಾಗಿ ಅತ್ತೆ ಮಾವ ಆಕೆ ಜೊತೆ ಜಗಳ ಮಾಡಿದ್ದಾರೆ. ನಿನಗೆ ಅಡುಗೆ ಬರಲ್ಲ, ನೀನು ಚೆನ್ನಾಗಿಲ್ಲ ಎಂದೆಲ್ಲ ಹೀಯಾಳಿಸಿದ್ದಾರೆ. ಜೊತೆಗೆ ನೀನು ವೇಶ್ಯಾವಾಟಿಕೆ ಮಾಡು ಎಂದು ಆಕೆಯನ್ನು ಪೀಡಿಸಿದ್ದು, ಆ ಬಗ್ಗೆ ಅಂಜನಾಬಾಯಿ ಹೆತ್ತವರ ಬಳಿಯೂ ಹೇಳಿಕೊಂಡಿದ್ದಳು.

ಆದರೆ ಈ ಬಗ್ಗೆ ಪೋಷಕರು ಆಕೆಗೆ ಸಮಾಧಾನ ಮಾಡಿದ್ದು, ಇಂದೆಲ್ಲ ನಾಳೆ ಸರಿಹೋಗಬಹುದು ಎಂದು ತಿಳುವಳಿಕೆ ಹೇಳಿದ್ದರು. ಈ ನಡುವೆ ಕಿರುಕುಳ ತಾಳಲಾರದೆ ಅಂಜನಾಬಾಯಿ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದಾಳೆ. ಈ ಬಗ್ಗೆ ಆಕೆಯ ತಂದೆ ವಿಜಯಕುಮಾರ್ ದೂರಿನ ಮೇರೆಗೆ ಮೃತಳ ಗಂಡ ಶೇಖ‌ರ್ ಸೇರಿ ಮೂವರ ವಿರುದ್ಧ ಬಸವಕಲ್ಯಾಣ ಪಟ್ಟಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

News Source : G1 News

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು