ಮಂಗಳೂರು: 2012 ರಲ್ಲಿ ಮಂಗಳೂರಿನಲ್ಲಿ ನಡೆದಿದ್ದ ಕೊಲೆ ಪ್ರಕರಣ ಸಂಬಂಧ ತಲೆಮರೆಸಿಕೊಂಡಿದ್ದ ಶಿಕ್ಷೆಗೊಳಗಾಗಿದ್ದ ಅಪರಾಧಿಯನ್ನು ಕೊನೆಗೂ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ
10 ವರ್ಷಗಳ ಜೈಲು ಶಿಕ್ಷೆಗೆ ಒಳಗಾಗಿದ್ದ ಅಪರಾಧಿ ಎನ್.ಎಂ.ಅಬ್ದುಲ್ ಅಝೀಝ್ ಶಿಕ್ಷೆ ಪ್ರಕಟವಾಗುತ್ತಿದ್ದಂತೆ ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಂಡು ಪೊಲೀಸರ ಕಣ್ಣಿಗೆ ಬೀಳದೆ ತಲೆಮರೆಸಿಕೊಂಡಿದ್ದನು. ಇದೀಗ ಆತ ಆಂಧ್ರಪ್ರದೇಶದಲ್ಲಿರುವ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿ ಅಝೀಝ್ ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ ಕರಾವಳಿಯಲ್ಲಿ ಹೀಟ್‌ವೇವ್ ಜೊತೆಗೆ ಮಳೆ ಮುನ್ಸೂನೆ: ಮಂಗಳೂರು-ಉಡುಪಿಗೆ ಯೆಲ್ಲೋ ಅಲರ್ಟ್
ಪ್ರಕರಣದ ಹಿನ್ನೆಲೆ

2012ರ ಜ.31 ರಂದು ಕಡಬ ಪೊಲೀಸ್ ಠಾಣಾ ವ್ಯಾಪ್ತಿಗೆ ಒಳಪಟ್ಟ ಪುತ್ತೂರು ತಾಲೂಕಿನ ಕೊಂಬಾರು ಗ್ರಾಮದ ಅಮೈತಡ್ಕ ಎಂಬಲ್ಲಿನ ರಸ್ತೆ ಪಕ್ಕ ಮಹಿಳೆಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು.
ಸ್ಥಳಕ್ಕೆ ಭೇಟಿ ನೀಡಿದ್ದ ಕಡಬ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು. ಅದರಂತೆ ಲಭ್ಯವಾದ ಸಾಕ್ಷ್ಯಾಧಾರಗಳನ್ನು ಆಧರಿಸಿ ಆರೋಪಿಯನ್ನು ಬಂಧಿಸಿ ಚಾರ್ಜ್ ಶೀಟ್ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ಆರೋಪಿಯನ್ನು ದೋಷಿ ಎಂದು ಹೇಳಿ 10 ವರ್ಷಗಳ ಶಿಕ್ಷೆ ಹಾಗೂ 2 ಲಕ್ಷ ದಂಡ ವಿಧಿಸಿ ಆದೇಶಿಸಿತ್ತು. ಇತ್ತ, ಶಿಕ್ಷೆ ಪ್ರಕಟವಾಗುತ್ತಿದ್ದಂತೆ ಬಂಧನದಿಂದ ತಪ್ಪಿಸಿಕೊಂಡಿದ್ದನು.
ಹೆಚ್ಚಿನ ಸುದ್ದಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

