ಹಿಂದೂ ಯುವತಿಯರ ಜೊತೆಗಿದ್ದ ಮುಸ್ಲಿಂ ಬಾಲಕನ ಮೇಲೆ ಹಲ್ಲೆ, ಅಪಹರಣ; ಬಜರಂಗದಳ ಕಾರ್ಯಕರ್ತರ ಮೇಲೆ ದೂರು!

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಸಂಭ್ರಮದ ನಡುವೆ ಅಹಿತಕರ ಘಟನೆಯೊಂದು ನಡೆದಿದೆ. ಹಿಂದೂ ಸ್ನೇಹಿತೆಯರ ಜೊತೆ ಜಾತ್ರೆಗೆ ಬಂದಿದ್ದ 17 ವರ್ಷದ ಮುಸ್ಲಿಂ ಬಾಲಕನ ಮೇಲೆ ಬಜರಂಗದಳದ ಕಾರ್ಯಕರ್ತರು ಎನ್ನಲಾದ ಗುಂಪೊಂದು ಹಲ್ಲೆ ನಡೆಸಿ, ಅಪಹರಿಸಿರುವ ಗಂಭೀರ ಆರೋಪ ಕೇಳಿಬಂದಿದೆ.

ಮುಸ್ಲಿಂ ಬಾಲಕನು ತನ್ನ ಹಿಂದೂ ಸ್ನೇಹಿತೆಯರೊಂದಿಗೆ ಜಾತ್ರೆಗೆ ತೆರಳಿದ್ದಾಗ, ಅಲ್ಲಿಗೆ ಬಂದ ಯುವಕರ ಗುಂಪು ಆತನನ್ನು ತಡೆದು ನಿಲ್ಲಿಸಿದೆ. “ಹಿಂದೂ ಹುಡುಗಿಯರ ಜೊತೆ ಯಾಕೆ ಬಂದಿದ್ದೀಯಾ? ಅವರನ್ನು ಲಾಡ್ಜ್‌ಗೆ ಕರೆದೊಯ್ಯುತ್ತಿದ್ದೀಯಾ?” ಎಂದು ಪ್ರಶ್ನಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಲಾಗಿದೆ. ಬಾಲಕನ ಮೇಲೆ ಮನಬಂದಂತೆ ಹಲ್ಲೆ ನಡೆಸಿದ ಗುಂಪು, ಬಳಿಕ ಆತನನ್ನು ಬಲವಂತವಾಗಿ ಅಪಹರಿಸಿದೆ ಎನ್ನಲಾಗಿದೆ.

Advertisement

ಅಪಹರಣದ ವೇಳೆ ಬಾಲಕನಿಂದ ಬಲವಂತವಾಗಿ ಕೆಲವು ಹೇಳಿಕೆಗಳನ್ನು ಕೊಡಿಸಿ, ಅದನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿರುವ ಆರೋಪವೂ ದೂರಿನಲ್ಲಿದೆ.ಅಪಹರಣದ ವೇಳೆ ಬಾಲಕನಿಂದ ಬಲವಂತವಾಗಿ ಕೆಲವು ಹೇಳಿಕೆಗಳನ್ನು ಕೊಡಿಸಿ, ಅದನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿರುವ ಆರೋಪವೂ ದೂರಿನಲ್ಲಿದೆ.ಸಂತ್ರಸ್ತ ಬಾಲಕ ನೀಡಿದ ದೂರಿನನ್ವಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಈಗಾಗಲೇ ತನಿಖೆ ಆರಂಭಿಸಿದ್ದು, ಘಟನೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.

ಇದನ್ನೂ ಓದಿ: ಕಾರ್ಕಳದಲ್ಲಿ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ, ರಿಕ್ಷಾ ಚಾಲಕ ಅರೆಸ್ಟ್

ಧಾರ್ಮಿಕ ಕಾರ್ಯಕ್ರಮಗಳು ನಡೆಯುವ ಸಂದರ್ಭದಲ್ಲಿ ಇಂತಹ ಘಟನೆಗಳು ನಡೆಯುತ್ತಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು