ಧಾರವಾಡ: ತನ್ನ ಸಮುದಾಯ ಹಾಗೂ ಸಾರಿಗೆ ಇಲಾಖೆಯ ಕೆಲವು ಅಧಿಕಾರಿಗಳ ವಿರೋಧದ ನಡುವೆಯೂ ಮುಸ್ಲಿಂ ವ್ಯಕ್ತಿಯೊಬ್ಬರು ಎನ್ಡಬ್ಲ್ಯುಕೆಎಸ್ಆರ್ಟಿಸಿ ಬಸ್ ಡಿಪೋ ನಿಲ್ದಾಣದ ಆವರಣದಲ್ಲಿ ಹನುಮಾನ್ ದೇವಾಲಯವನ್ನು ನಿರ್ಮಿಸಿದ್ದಾರೆ. ಒಂದು ವರ್ಷದ ಹಿಂದೆಯೇ ನಿರ್ಮಿಸಲಾಗಿದ್ದ ಈ ದೇವಾಲಯವು ಇದೀಗ ಬೆಳಕಿಗೆ ಬಂದಿದೆ.
ಎನ್ಡಬ್ಲ್ಯುಕೆಎಸ್ಆರ್ಟಿಸಿ ಭದ್ರತಾ ವಿಭಾಗದಲ್ಲಿ ಕಾನ್ಸ್ಟೇಬಲ್ ಆಗಿರುವ ಲಾಲ್ಸಾಬ್ ರಸಲ್ಸಾಬ್ ಬುದಿಹಾಳ್ ಅವರು ಈ ದೇವಾಲಯವನ್ನು ನಿರ್ಮಿಸಿದ ಮುಸ್ಲಿಂ ವ್ಯಕ್ತಿಯಾಗಿದ್ದಾರೆ. ತಮ್ಮ ಸ್ವಂತ ಹಣದ ಜೊತೆಗೆ ಸಹೋದ್ಯೋಗಿಗಳು ನೀಡಿದ ಹಣದಿಂದ ಈ ದೇವಾಲಯ ನಿರ್ಮಾಣ ಮಾಡಿದ್ದಾರೆ.

ಇದನ್ನೂ ಓದಿ: ಕೆಎಸ್ಆರ್ಟಿಸಿ ಪ್ರೀಮಿಯರ್ ಬಸ್ ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಸರ್ಕಾರದಿಂದ ಗಿಫ್ಟ್
ಅನೇಕರು ವಿರೋಧ ವ್ಯಕ್ತಪಡಿಸಿದರೂ ಮುಸ್ಲಿಂ ಸಮುದಾಯದ ಒಂದಷ್ಟು ಮಂದಿ ಉದ್ಯೋಗಿಗಳು ಬೆಂಬಲಿಸಿದ್ದಾರೆ ಎಂದು ಎನ್ಡಬ್ಲ್ಯುಕೆಎಸ್ಆರ್ಟಿಸಿ ಅಧಿಕಾರಿಯೊಬ್ಬರು ಹೇಳಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

