ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ಆಭರಣ ಮಳಿಗೆಯೊಂದರಲ್ಲಿ ಡಿ.28ರಂದು ನಡೆದಿದ್ದ 10 ಕೋಟಿ ಮೌಲ್ಯದ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಬಂಧಿತ ವ್ಯಕ್ತಿಗಳನ್ನು ದರ್ಭಾಂಗದ ಹೃಷಿಕೇಶ್ ಸಿಂಗ್ ಮತ್ತು ಭಾಗಲ್ಪುರದ ಪಂಕಜ್ ಕುಮಾರ್ ಅಲಿಯಾಸ್ ಸತುವಾ ಎಂದು ಗುರುತಿಸಲಾಗಿದೆ, ಇವರು ಕರ್ನಾಟಕದ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿರುವ ಆಭರಣ ಮತ್ತು ವಜ್ರದ ಅಂಗಡಿಯಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ಬೇಕಾಗಿದ್ದ ಆರೋಪಿಗಳಾಗಿದ್ದಾರೆ.

ಇದನ್ನೂ ಓದಿ: Special: ಮುಖೇಶ್ ಅಂಬಾನಿ ಮನೆ ಕರೆಂಟ್ ಬಿಲ್ ಎಷ್ಟು ಗೊತ್ತ?
ಕರ್ನಾಟಕ ಪೊಲೀಸರ ಸಹಯೋಗದೊಂದಿಗೆ ಬಿಹಾರದ ಎಸ್‌ಟಿಎಫ್ ಈ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಬಂಧಿತರಿಂದ ಆಭರಣ ಮಳಿಗೆಯಲ್ಲಿ ಕಳವು ಮಾಡಿದ್ದ ಚಿನ್ನದ ಸರ, ಉಂಗುರ, 1 ಲಕ್ಷ ನಗದು, ಬೈಕ್ ವಶಪಡಿಸಿಕೊಳ್ಳಲಾಗಿದೆ.
ಕಳೆದ ಡಿ.28ರಂದು 2 ಬೈಕ್‌ನಲ್ಲಿ ಬಂದಿದ್ದ 5 ದರೋಡೆಕೋರರ ಗುಂಪು ಹಾಡಹಗಲೇ ಹುಣಸೂರಿನ ಸೈಗೋಲ್ಡ್ ಆ್ಯಂಡ್ ಡೈಮಂಡ್ಸ್ ಎಂಬ ಆಭರಣ ಶೋರೋಂಗೆ ನುಗ್ಗಿತ್ತು. ಈ ವೇಳೆ ಗನ್ ಹಿಡಿದು ಅಲ್ಲಿದ್ದ ಸಿಬ್ಬಂದಿ ಮತ್ತು ಗ್ರಾಹಕರನ್ನು ಬೆದರಿಸಿದ್ದ ದರೋಡೆಕೋರರು ಕೇವಲ 4 ನಿಮಿಷಗಳ ಅವಧಿಯಲ್ಲಿ 10 ಕೋಟಿ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು.
ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್: 7353833811, ಇ-ಮೇಲ್- g1newsdpt@gmail.com

