ಮೈಸೂರು ದಸರಾ 2026 ಸಿದ್ಧತೆ ಚುರುಕು: ಮೈಸೂರು ಜಿ.ಪಂ.ನಲ್ಲಿ ಉನ್ನತ ಮಟ್ಟದ ಪರಿಶೀಲನಾ ಸಭೆ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ರ ಸಂಭ್ರಮದ ಆಚರಣೆಗೆ ಸಂಬಂಧಿಸಿದಂತೆ ಪೂರ್ವಭಾವಿ ಸಿದ್ಧತೆಗಳ ಕುರಿತು ಮೈಸೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜನಪ್ರತಿನಿಧಿಗಳು ಹಾಗೂ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಮಹತ್ವದ ಪರಿಶೀಲನಾ ಸಭೆ ನಡೆಯಿತು.

ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಈ ಬಾರಿಯ ದಸರಾವನ್ನು ಅತ್ಯಂತ ವೈಭವೋಪೇತವಾಗಿ ಹಾಗೂ ಸಾರ್ವಜನಿಕರಿಗೆ, ದೇಶ-ವಿದೇಶಗಳಿಂದ ಆಗಮಿಸುವ ಪ್ರವಾಸಿಗರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ವಿಜೃಂಭಣೆಯಿಂದ ಆಚರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದರು.

ದಸರಾ ಮಹೋತ್ಸವದ ರೂಪುರೇಷೆ ಮತ್ತು ಸಂಘಟನೆಯ ಕುರಿತು ಚರ್ಚಿಸಲು ಕರೆಯಲಾಗಿದ್ದ ಈ ಸಭೆಯಲ್ಲಿ ಪ್ರಮುಖ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು. ಸಚಿವರಾದ ಈಶ್ವರ್ ಖಂಡ್ರೆ, ಯತೀಂದ್ರ ಸಿದ್ದರಾಮಯ್ಯ, ಹಿರಿಯ ಶಾಸಕರು ಹಾಗೂ ಮಾಜಿ ಸಚಿವರಾದ ಜಿ. ಟಿ. ದೇವೇಗೌಡ, ತನ್ವೀರ್ ಸೇಠ್, ಹರೀಶ್ ಗೌಡ, ರಮೇಶ್ ಬಾಬು ಬಂಡಿಸಿದ್ಧೇಗೌಡ ಹಾಗೂ ರವಿಶಂಕರ್.

ಇದನ್ನೂ ಓದಿ: ವಿಧಾನಸೌಧದಲ್ಲಿ ‘ಉರ್ದು ಹಬ್ಬ’ ಆಚರಣೆಗೆ ಸರ್ಕಾರದ ನಿರ್ಧಾರ: ವೋಟ್‌ಬ್ಯಾಂಕ್ ರಾಜಕಾರಣ ಎಂದು ಬಿಜೆಪಿ ಆಕ್ರೋಶ

ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ, ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ವಾರ್ತಾ ಇಲಾಖೆಯ ಆಯುಕ್ತರಾದ ಎಂ. ಎನ್. ಅನುಚೇತ್ ಸೇರಿದಂತೆ ವಿವಿಧ ಇಲಾಖೆಯ ಉನ್ನತಾಧಿಕಾರಿಗಳು ಉಪಸ್ಥಿತರಿದ್ದರು. ದಸರಾ ದಿನಗಳಲ್ಲಿ ನಗರದಲ್ಲಿ ವಾಹನ ದಟ್ಟಣೆ ನಿಯಂತ್ರಣ ಮತ್ತು ಸಾರ್ವಜನಿಕರ ಸುರಕ್ಷತೆಗೆ ಕಟ್ಟುನಿಟ್ಟಿನ ಪೊಲೀಸ್ ಬಂದೋಬಸ್ತ್ ಕಲ್ಪಿಸಲು ಪೊಲೀಸ್ ಆಯುಕ್ತರಿಗೆ ಸೂಚಿಸಲಾಯಿತು.

ಮೈಸೂರು ನಗರದ ಪ್ರಮುಖ ರಸ್ತೆಗಳು, ವೃತ್ತಗಳು ಹಾಗೂ ಅರಮನೆ ಆವರಣದಲ್ಲಿ ಜಗಮಗಿಸುವ ವಿದ್ಯುತ್ ದೀಪಾಲಂಕಾರ ವ್ಯವಸ್ಥೆಯನ್ನು ಶೀಘ್ರವೇ ಪೂರ್ಣಗೊಳಿಸಲು ನಿರ್ಧರಿಸಲಾಯಿತು. ನಾಡಹಬ್ಬ ವೀಕ್ಷಣೆಗೆ ಆಗಮಿಸುವ ಲಕ್ಷಾಂತರ ಜನರಿಗೆ ಕುಡಿಯುವ ನೀರು, ನೈರ್ಮಲ್ಯ ಹಾಗೂ ಪ್ರದರ್ಶನ ಸೌಲಭ್ಯಗಳಲ್ಲಿ ಯಾವುದೇ ಕೊರತೆಯಾಗದಂತೆ ಕ್ರಮವಹಿಸಲು ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಲಾಯಿತು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *