ಮೈಸೂರು: ಪತ್ನಿಯ ಶೀಲದ ಮೇಲೆ ಅನುಮಾನ; ಕೊಡಲಿಯಿಂದ ಹೊಡೆದು, ಉಸಿರುಗಟ್ಟಿಸಿ ಕೊಂದ ಪಾಪಿ ಪತಿ!

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಹಳೇ ಕೆಸರೆ ಗ್ರಾಮದಲ್ಲಿ ಭೀಕರ ಹತ್ಯೆಯೊಂದು ನಡೆದಿದೆ. ಕೆಲಸ ಮುಗಿಸಿ ಮನೆಗೆ ತಡವಾಗಿ ಬರುತ್ತಿದ್ದಾಳೆ ಎಂಬ ಕ್ಷುಲ್ಲಕ ಕಾರಣಕ್ಕೆ ಪತ್ನಿಯ ಶೀಲದ ಮೇಲೆ ಅನುಮಾನ ಪಟ್ಟ ಪತಿಯೊಬ್ಬ, ಆಕೆಯನ್ನು ಅತಿ ಕ್ರೂರವಾಗಿ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾನೆ.

ಮೃತರನ್ನು ಹಳೇ ಕೆಸರೆ ಗ್ರಾಮದ ನಿವಾಸಿ ಪುಷ್ಪಾ (26) ಎಂದು ಗುರುತಿಸಲಾಗಿದೆ. ಈಕೆಯ ಪತಿ ಮಹೇಶ್ ಕೊಲೆ ಮಾಡಿದ ಆರೋಪಿ. ಪುಷ್ಪಾ ಅವರು ಮೈಸೂರಿನ ದೇವರಾಜ ಅರಸು ರಸ್ತೆಯಲ್ಲಿರುವ ಖಾಸಗಿ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸದ ಒತ್ತಡದಿಂದಾಗಿ ಅವರು ಪ್ರತಿದಿನ ಮನೆಗೆ ಬರುವುದು ತಡವಾಗುತ್ತಿತ್ತು ಎನ್ನಲಾಗಿದೆ.

ಮನೆಗೆ ತಡವಾಗಿ ಬರುತ್ತಿದ್ದ ಪತ್ನಿಯ ಮೇಲೆ ಮಹೇಶ್ ಅನುಮಾನ ಪಡುತ್ತಿದ್ದ ಎನ್ನಲಾಗಿದೆ. ಇದೇ ವಿಚಾರವಾಗಿ ದಂಪತಿಗಳ ನಡುವೆ ಪ್ರತಿದಿನ ಜಗಳ ನಡೆಯುತ್ತಿತ್ತು. ನಿನ್ನೆ ತಡರಾತ್ರಿ ಕೂಡ ಇದೇ ವಿಚಾರಕ್ಕೆ ಗಲಾಟೆ ನಡೆದಿದ್ದು, ಆವೇಶಕ್ಕೆ ಒಳಗಾದ ಮಹೇಶ್, ಪುಷ್ಪಾ ಅವರ ತಲೆಗೆ ಕೊಡಲಿಯಿಂದ ಬಲವಾಗಿ ಹೊಡೆದಿದ್ದಾನೆ. ಬಳಿಕ ದಿಂಬಿನಿಂದ ಮುಖ ಒತ್ತಿ ಹಿಡಿದು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.

ಇದನ್ನೂ ಓದಿ: Crime : ಪತ್ನಿಯನ್ನು ಹೂತ ಜಾಗದಲ್ಲೇ ನಾಯಿಯ ಶವವನ್ನು ಹೂತು ಯಾಮಾರಿಸಿದ ಪಾಪಿ ಪತಿ

ಪತ್ನಿಯನ್ನು ಕೊಂದ ಬಳಿಕ ಪಶ್ಚಾತ್ತಾಪಕ್ಕೊಳಗಾದವನಂತೆ ಆರೋಪಿ ಮಹೇಶ್ ನೇರವಾಗಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಸ್ಥಳಕ್ಕೆ ನರಸಿಂಹರಾಜ (NR) ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕ್ರೈಮ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು