ಐಪಿಎಲ್ ಅಭಿಮಾನಿಗಳಿಗೆ ಬಿಎಂಆರ್‌ಸಿಎಲ್ ಗುಡ್ ನ್ಯೂಸ್! ಮುಂಜಾನೆ 2 ಗಂಟೆಯವರೆಗೆ ಮೆಟ್ರೋ ಸೇವೆ

ಬೆಂಗಳೂರು: ಐಪಿಎಲ್ 2026ರ ಉದ್ಘಾಟನಾ ಪಂದ್ಯದ ಸಂಭ್ರಮಕ್ಕೆ ಬೆಂಗಳೂರು ಸಜ್ಜಾಗಿದೆ. ಮಾರ್ಚ್ 28ರಂದು ಆರ್‌ಸಿಬಿ (RCB) ಮತ್ತು ಎಸ್‌ಆರ್‌ಎಚ್ (SRH) ನಡುವೆ ನಡೆಯಲಿರುವ ಪಂದ್ಯಕ್ಕಾಗಿ ನಗರದ ಸಾರಿಗೆ ಮತ್ತು ಸಂಚಾರ ವ್ಯವಸ್ಥೆಯಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ.

ಮೆಟ್ರೋ ಸಂಚಾರದ ಹೊಸ ಸಮಯ (ಮಾರ್ಚ್ 28):

ಪಂದ್ಯ ಮುಗಿದ ಬಳಿಕ ಅಭಿಮಾನಿಗಳು ಸುರಕ್ಷಿತವಾಗಿ ಮನೆ ತಲುಪಲು ಮೆಟ್ರೋ ರೈಲುಗಳ ಸಂಚಾರವನ್ನು ಮುಂಜಾನೆ 2 ಗಂಟೆಯವರೆಗೆ ವಿಸ್ತರಿಸಲಾಗಿದೆ.

ವೈಟ್‌ಫೀಲ್ಡ್ (ಕಾಡುಗೋಡಿ): ಕೊನೆಯ ರೈಲು ರಾತ್ರಿ 12.30ಕ್ಕೆ.

ಚೆಲ್ಲಘಟ್ಟ, ರೇಷ್ಮೆ ಸಂಸ್ಥೆ ಮತ್ತು ಮಾದಾವರ: ಕೊನೆಯ ರೈಲು ರಾತ್ರಿ 12.45ಕ್ಕೆ.

ಬೊಮ್ಮಸಂದ್ರ: ಕೊನೆಯ ರೈಲು ರಾತ್ರಿ 01.00ಕ್ಕೆ.

ಆರ್.ವಿ. ರಸ್ತೆ: ಕೊನೆಯ ರೈಲು ಮುಂಜಾನೆ 02.00ಕ್ಕೆ.

ಮೆಜೆಸ್ಟಿಕ್ (ನಾಡಪ್ರಭು ಕೆಂಪೇಗೌಡ ನಿಲ್ದಾಣ): ಈ ನಿಲ್ದಾಣದಿಂದ ನಾಲ್ಕೂ ದಿಕ್ಕುಗಳಿಗೆ ಮಧ್ಯರಾತ್ರಿ 01:30ಕ್ಕೆ ಕೊನೆಯ ರೈಲುಗಳು ಹೊರಡಲಿವೆ.

ಇದನ್ನೂ ಓದಿ: RCB ಮಾರಾಟದ ಬೆನ್ನಲ್ಲೇ ವಿಜಯ್ ಮಲ್ಯ ಭಾವುಕ ಪತ್ರ: 450 ಕೋಟಿಯ ಹೂಡಿಕೆ ಇಂದು 16,500 ಕೋಟಿ!

ಟ್ರಾಫಿಕ್ ಮತ್ತು ಪಾರ್ಕಿಂಗ್ ನಿಯಮಗಳು:

ಕ್ರೀಡಾಂಗಣದ ಸುತ್ತಮುತ್ತಲಿನ ವಾಹನ ದಟ್ಟಣೆ ನಿಯಂತ್ರಿಸಲು ಸಂಚಾರಿ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.

ಪಾರ್ಕಿಂಗ್ ನಿಷೇಧ: ಕ್ವೀನ್ಸ್ ರಸ್ತೆ, ಎಂ.ಜಿ. ರಸ್ತೆ, ರಾಜಭವನ ರಸ್ತೆ, ಕಬ್ಬನ್ ರಸ್ತೆ, ಲ್ಯಾವೆಲ್ಲೆ ರಸ್ತೆ ಮತ್ತು ಕಸ್ತೂರಬಾ ರಸ್ತೆಯಂತಹ ಪ್ರಮುಖ ರಸ್ತೆಗಳಲ್ಲಿ ವಾಹನ ನಿಲುಗಡೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

ಪರ್ಯಾಯ ಪಾರ್ಕಿಂಗ್: ಸೆಂಟ್ ಜೋಸೆಫ್ ಇಂಡಿಯನ್ ಸ್ಕೂಲ್ ಮೈದಾನ, ಕಂಠೀರವ ಕ್ರೀಡಾಂಗಣ ಮತ್ತು ಶಿವಾಜಿನಗರ ಬಿಎಂಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸಂಕೀರ್ಣಗಳಲ್ಲಿ ವಾಹನ ನಿಲುಗಡೆಗೆ ಅವಕಾಶ ನೀಡಲಾಗಿದೆ.

ಸಾರ್ವಜನಿಕ ಸಾರಿಗೆಗೆ ಆದ್ಯತೆ: ಪಂದ್ಯದ ದಿನ ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಮೆಟ್ರೋ ಅಥವಾ ಬಿಎಂಟಿಸಿ ಬಸ್ಸುಗಳನ್ನು ಬಳಸಲು ಪೊಲೀಸರು ಸಲಹೆ ನೀಡಿದ್ದಾರೆ.

ಕ್ರಿಕೆಟ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ