ಬೆಂಗಳೂರು; ರಾಜಧಾನಿ ಬೆಂಗಳೂರಿನ ಸಾರ್ವಜನಿಕ ಸಾರಿಗೆಯ ಜೀವನಾಡಿಯಾಗಿರುವ ‘ನಮ್ಮ ಮೆಟ್ರೋ’ದ ಬಹುನಿರೀಕ್ಷಿತ ‘ಗುಲಾಬಿ ಮಾರ್ಗ’ (Pink Line) ನವೆಂಬರ್ 13ರಂದು ಲೋಕಾರ್ಪಣೆಗೊಳ್ಳಲಿದೆ. ಮೊದಲ ಹಂತದಲ್ಲಿ ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ ಮಾರ್ಗವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ.
ನವೆಂಬರ್ 13ರಂದು ಪ್ರಧಾನಿ ಮೋದಿ ಅವರು ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದು, ಬೆಂಗಳೂರಿನಲ್ಲಿ ಮೆಟ್ರೋ ಉದ್ಘಾಟನೆ ಸೇರಿದಂತೆ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ, ಮೈಸೂರಿನ ಐತಿಹಾಸಿಕ ಕಾರ್ಯಕ್ರಮದಲ್ಲೂ ಭಾಗಿಯಾಗಲಿದ್ದಾರೆ.

ನವೆಂಬರ್ 13ರ ಪ್ರಧಾನಿ ಮೋದಿ ಅವರ ಸಂಪೂರ್ಣ ವೇಳಾಪಟ್ಟಿ:
ಬೆಳಿಗ್ಗೆ 10:05: ನವದೆಹಲಿಯಿಂದ ನಿರ್ಮಿತ ವಿಮಾನದ ಮೂಲಕ ಬೆಂಗಳೂರಿನ ಎಚ್ಎಎಲ್ (HAL) ವಿಮಾನ ನಿಲ್ದಾಣಕ್ಕೆ ಆಗಮನ.

ಬೆಳಿಗ್ಗೆ 10:45: ಬೆಂಗಳೂರಿನಲ್ಲಿ ‘ಪ್ರಶಾಂತಿ ಕುಟೀರಂ ಸುವರ್ಣ ಮಹೋತ್ಸವ’ ಕಾರ್ಯಕ್ರಮದಲ್ಲಿ ಭಾಗಿ.
ಮಧ್ಯಾಹ್ನ 12:40 – 12:45: ತಾವರೆಕೆರೆ ಮೆಟ್ರೋ ರೈಲು ನಿಲ್ದಾಣಕ್ಕೆ ಆಗಮಿಸಿ, ಪಿಂಕ್ ಲೈನ್ಗೆ ಹಸಿರು ನಿಶಾನೆ ತೋರಲಿದ್ದಾರೆ. ಬಳಿಕ ತಾವರೆಕೆರೆಯಿಂದ ಐಐಎಂಬಿ (IIMB) ನಿಲ್ದಾಣದವರೆಗೆ ಮೆಟ್ರೋದಲ್ಲಿ ಪ್ರಧಾನಿ ಪ್ರಯಾಣ.

ಮಧ್ಯಾಹ್ನ 01:15: ಐಐಎಂಬಿ ಆಡಿಟೋರಿಯಂನಲ್ಲಿ ವಿವಿಧ ಮೂಲಸೌಕರ್ಯ ಯೋಜನೆಗಳ ಶಂಕುಸ್ಥಾಪನೆ, ರಾಷ್ಟ್ರಕ್ಕೆ ಸಮರ್ಪಣೆ ಮತ್ತು ಕಾರ್ಯಕ್ರಮಗಳಿಗೆ ಚಾಲನೆ.
ಮಧ್ಯಾಹ್ನ 02:30: ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಮೈಸೂರಿಗೆ ನಿರ್ಗಮನ.
ಮಧ್ಯಾಹ್ನ 03:30: ಮೈಸೂರಿನ ಕೆ.ಸಿ. ಲೇಔಟ್ ಪಾರ್ಕ್ನಲ್ಲಿ ನಡೆಯಲಿರುವ ‘ಭಾರತ್ ವ್ಯಾನ್’ ಕಾರ್ಯಕ್ರಮದಲ್ಲಿ ಭಾಗಿ.
ಸಂಜೆ 04:00: ಮೈಸೂರಿನಲ್ಲಿ ವಿಶ್ವದಲ್ಲೇ ಮೊದಲ ಬಾರಿಗೆ ನಿರ್ಮಿಸಲಾದ ‘ಕಾಸ್ಮೋಸ್’ (Cosmos) ತಾರಾಲಯ ಉದ್ಘಾಟನೆ.
ಸಂಜೆ 06:05: ಮೈಸೂರು ವಿಮಾನ ನಿಲ್ದಾಣದಿಂದ ನವದೆಹಲಿಗೆ ನಿರ್ಗಮನ.
ಮೈಸೂರಿನಲ್ಲಿ ವಿಶ್ವದ ಮೊದಲ ‘ಟಿಲ್ಟೆಡ್ LED ಡೋಮ್’ ತಾರಾಲಯ ಲೋಕಾರ್ಪಣೆ!
ಪ್ರಧಾನಿ ಮೋದಿ ಅವರು ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಿರ್ಮಾಣವಾಗಿರುವ ವಿಶ್ವದ ಮೊದಲ ಟಿಲ್ಟೆಡ್ ಎಲ್ಇಡಿ ಡೋಮ್ ಪ್ಲಾನೆಟೋರಿಯಂ ಅನ್ನು ಲೋಕಾರ್ಪಣೆ ಮಾಡಲಿದ್ದಾರೆ,. ಮೈಸೂರು ವಿಶ್ವವಿದ್ಯಾನಿಲಯದ ಶ್ರೀ ಜಯಚಾಮರಾಜ ಒಡೆಯರ್ ಉನ್ನತ ಕಲಿಕಾ ಕೇಂದ್ರದ ಆವರಣದಲ್ಲಿ 3 ಎಕರೆ ಜಾಗದಲ್ಲಿ ಇದನ್ನು ನಿರ್ಮಿಸಲಾಗಿದೆ. ಬರೋಬ್ಬರಿ 91 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಯೋಜನೆ ಸಾಕಾರಗೊಂಡಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ MPLADS ನಿಧಿ ಹಾಗೂ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ಸಹಯೋಗದಲ್ಲಿ ರೂಪುಗೊಂಡಿದೆ.
ಮತ್ತಷ್ಟು ಓದಲು ಇಲ್ಲಿ ಕ್ಲಿಕ್ ಮಾಡಿ



