ದಿಬ್ರುಗಢ: ಪ್ರಧಾನಿ ನರೇಂದ್ರ ಮೋದಿಯವರ ವಿಮಾನವು ಮೊದಲ ಬಾರಿಗೆ ಅಸ್ಸಾಂನ ಮೊರಾನ್‌ನಲ್ಲಿರುವ ಈಶಾನ್ಯದ ಮೊದಲ ತುರ್ತು ಲ್ಯಾಂಡಿಂಗ್ ಸೌಲಭ್ಯದಲ್ಲಿ ಇಳಿದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು. ಇದು ರಾಜ್ಯದ ಕಾರ್ಯತಂತ್ರ ಮತ್ತು ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಪ್ರಮುಖ ಮೈಲಿಗಲ್ಲಿಗೆ ಸಾಕ್ಷಿಯಾಯಿತು.
ತುರ್ತು ಸಂದರ್ಭಗಳಲ್ಲಿ ಭಾರತೀಯ ವಾಯುಪಡೆಯ ಯುದ್ಧ ವಿಮಾನಗಳು ಟೇಕ್ ಆಫ್ ಮತ್ತು ಲ್ಯಾಂಡ್ ಆಗಲು ಸಾಧ್ಯವಾಗುವಂತೆ ವಿಶೇಷವಾಗಿ ವಿನ್ಯಾಸಗೊಳಿಸಿ ರಾಷ್ಟ್ರೀಯ ಹೆದ್ದಾರಿಯನ್ನು ಅಭಿವೃದ್ಧಿಪಡಿಸಲಾಗಿದೆ. 4.2 ಕಿ.ಮೀ. ಉದ್ದದ ಈ ಹೆದ್ದಾರಿಯಲ್ಲಿ ಮೊದಲ ಲ್ಯಾಂಡಿಂಗ್ ಮಾಡುವ ಮೂಲಕ ಪ್ರಧಾನಿಯವರು ಈ ಸೌಲಭ್ಯವನ್ನು ಉದ್ಘಾಟನೆ ಮಾಡಿದರು.

ಇದನ್ನೂ ಓದಿ: ನಾಲಿಗೆಯ ಮೇಲೆ ಮಚ್ಚೆ ಇದ್ದರೆ ಹೇಳಿದ್ದೆಲ್ಲ ನಿಜವಾಗುತ್ತಾ? ಸಂಪ್ರದಾಯ ಮತ್ತು ವಿಜ್ಞಾನ ಹೇಳೋದೇನು?
ಪ್ರಧಾನಿ ಮೋದಿ ಅವರು ದಿಬ್ರುಗಢದ ಮೋರನ್ ಬೈಪಾಸ್‌ನಲ್ಲಿರುವ ತುರ್ತು ಲ್ಯಾಂಡಿಂಗ್ ಸೌಲಭ್ಯಕ್ಕೆ ಚಾಬುವಾ ವಿಮಾನ ನಿಲ್ದಾಣದಿಂದ ಆಗಮಿಸಿದರು.
100 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಹೆದ್ದಾರಿ ತಲುಪಲು ಚಾಬುವಾದಿಂದ ಭಾರತೀಯ ವಾಯುಪಡೆಯ ಸಿ -130 ಜೆ ವಿಮಾನವನ್ನು ಬಳಸಿಕೊಂಡರು. ಇದು ಈಶಾನ್ಯ ರಾಜ್ಯಗಳಲ್ಲಿ ಇಂತಹ ಮೊದಲ ಮೂಲಸೌಕರ್ಯ ಯೋಜನೆಯಾಗಿದೆ.
ಚುನಾವಣೆ ಎದುರಿಸುತ್ತಿರುವ ಅಸ್ಸಾಂಗೆ ಪ್ರಧಾನಿ ಒಂದು ದಿನದ ಪ್ರವಾಸದ ವೇಳೆ ಪ್ರಧಾನಿ ಮೋದಿ 5,500 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ.
ಪ್ರಧಾನಿ ಮೋದಿ ಅವರನ್ನು ಅಸ್ಸಾಂ ರಾಜ್ಯಪಾಲ ಲಕ್ಷ್ಮಣ್ ಪ್ರಸಾದ್ ಆಚಾರ್ಯ, ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮ, ಕೇಂದ್ರ ಸಚಿವ ಸರ್ಬಾನಂದ ಸೋನೋವಾಲ್ ಮತ್ತು ಇತರ ಹಿರಿಯ ರಾಜ್ಯ ಸರ್ಕಾರಿ ಅಧಿಕಾರಿಗಳು ಬರಮಾಡಿಕೊಂಡರು.
ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್: 7353833811, ಇ-ಮೇಲ್- g1newsdpt@gmail.com

