ಪ್ರೇಯಸಿಯನ್ನು ಹತ್ಯೆ ಮಾಡಿ ದೇಹ ತುಂಡರಿಸಿದ ನೌಕಾಪಡೆ ಸಿಬ್ಬಂದಿ ಬಂಧನ

ವಿಶಾಖಪಟ್ಟಣಂ : ಆಂಧ್ರಪ್ರದೇಶದ ಗಜುವಾಕಾದಲ್ಲಿ ನಡೆದ ಅಮಾನುಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೌಕಾಪಡೆ  ಸಿಬ್ಬಂದಿಯೊಬ್ಬ ತನ್ನ ಪ್ರೇಯಸಿಯನ್ನು ಹತ್ಯೆಗೈದು, ಶವವನ್ನು ತುಂಡರಿಸಿ ಸೂಟ್‌ಕೇಸ್‌ನಲ್ಲಿ ಸಾಗಿಸಿರುವ ಅಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ಪೊಲೀಸರ ಮಾಹಿತಿ ಪ್ರಕಾರ, ಆರೋಪಿಯನ್ನು ರವೀಂದ್ರ ಎಂದು ಗುರುತಿಸಲಾಗಿದ್ದು, ಆತ ನೌಕಾಪಡೆಯಲ್ಲಿ ತಾಂತ್ರಿಕ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದನು. ಅವನು ತನ್ನ ಪ್ರೇಯಸಿ ಮೌನಿಕಾಳನ್ನು ಸ್ನೇಹಿತನ ಮನೆಗೆ ಕರೆಸಿ, ಜಗಳ ಮಾಡಿಕೊಂಡಿದ್ದಾನೆ. ನಂತರ ಹತ್ಯೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ ನಾಗರಿಕ ಸೇವೆಗೆ ಹೊಸ ಮುಖ: ಬೆಂಗಳೂರಿಗೆ 10 ಪ್ರೀಮಿಯಂ ಕೇಂದ್ರಗಳು

ಹತ್ಯೆಯ ನಂತರ ಆರೋಪಿಯು ಶವವನ್ನು ತುಂಡರಿಸಿ, ಕೆಲವು ಭಾಗಗಳನ್ನು ಟ್ರಾಲಿ ಸೂಟ್‌ಕೇಸ್‌ನಲ್ಲಿ ಹಾಕಿ ಸಾಗಿಸಿದ್ದಾನೆ. ಇನ್ನೂ ಕೆಲವು ದೇಹದ ಭಾಗಗಳನ್ನು ಫ್ರಿಜ್‌ನಲ್ಲಿ ಇಟ್ಟುಕೊಂಡಿದ್ದಾನೆ ಎಂದು ತನಿಖೆಯಲ್ಲಿ ಬಹಿರಂಗವಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಗಳು ಹಾಗೂ ಪೊಲೀಸ್ ತನಿಖೆಯಿಂದ ಸಂಪೂರ್ಣ ಘಟನೆ ಮಾಹಿತಿ ಬಹಿರಂಗವಾಗಿದೆ. ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಹಣಕಾಸು ವಿಚಾರಗಳು ಹಾಗೂ ಸಂಬಂಧ ಬಹಿರಂಗ ಮಾಡುವ ಬೆದರಿಕೆ ಹಿನ್ನೆಲೆಯಲ್ಲಿ ಇಬ್ಬರ ನಡುವೆ ಜಗಳ ಉಂಟಾಗಿ, ಕೊಲೆ ನಡೆದಿದೆ ಎಂದು ಹೇಳಲಾಗಿದೆ.

ದೇಶದ ಮತ್ತಷ್ಟು ಸುದ್ದಿಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ 

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು