ನೀಟ್ ಯುಜಿ ಮರು ಪರೀಕ್ಷಾ ದಿನಾಂಕ ಪ್ರಕಟ: ಎನ್‌ಟಿಎಯಿಂದ ವಿದ್ಯಾರ್ಥಿಗಳಿಗೆ ಬಿಗ್ ರಿಲೀಫ್; ಈ ಬಾರಿ ಸಿಗಲಿದೆ ಹೆಚ್ಚುವರಿ 15 ನಿಮಿಷ ಕಾಲಾವಕಾಶ!

ದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ ನೀಟ್ ಯುಜಿ (NEET UG 2026) ಪರೀಕ್ಷೆಯ ವಿವಾದಗಳ ನಡುವೆ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಮರು ಪರೀಕ್ಷೆಯ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನಡೆಯಲಿದೆ, ಈ ಬಾರಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎನ್‌ಟಿಎ ಹಲವು ವಿಶೇಷ ಮತ್ತು ಮಹತ್ವದ ಕ್ರಮಗಳನ್ನು ಘೋಷಿಸಿದೆ.

ಪರೀಕ್ಷೆಯ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಎದುರಾಗುವ ಅತಿ ದೊಡ್ಡ ಸವಾಲೆಂದರೆ ಅದು ಸಮಯದ ಅಭಾವ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಎನ್‌ಟಿಎ, ಈ ಬಾರಿ ಅಭ್ಯರ್ಥಿಗಳಿಗೆ ಪ್ರಶ್ನೆಗಳನ್ನು ಸರಿಯಾಗಿ ಓದಿ, ಯೋಚಿಸಿ ಉತ್ತರಿಸಲು ಅನುಕೂಲವಾಗುವಂತೆ ಹೆಚ್ಚುವರಿ 15 ನಿಮಿಷಗಳ ಕಾಲಾವಕಾಶವನ್ನು ನೀಡಲು ನಿರ್ಧರಿಸಿದೆ. ಈ ಹಿಂದೆ 3 ಗಂಟೆಗಳ ಕಾಲ ನಡೆಯುತ್ತಿದ್ದ ಪರೀಕ್ಷೆ, ಈ ಬಾರಿ ಮಧ್ಯಾಹ್ನ 2 ಗಂಟೆಯಿಂದ ಆರಂಭವಾಗಿ ಸಂಜೆ 5:15 ರವರೆಗೆ ನಡೆಯಲಿದೆ. ಈ ಕ್ರಮದಿಂದಾಗಿ ವಿದ್ಯಾರ್ಥಿಗಳು ಯಾವುದೇ ಆತಂಕ ಅಥವಾ ತರಾತುರಿಯಿಲ್ಲದೆ ನಿರಾಳವಾಗಿ ಪರೀಕ್ಷೆ ಬರೆಯಬಹುದಾಗಿದೆ. ಜೊತೆಗೆ, ಪತ್ರಿಕೆಯಲ್ಲಿ ರಫ್ ವರ್ಕ್ (Rough Work) ಮಾಡಲು ಈ ಬಾರಿ ಹೆಚ್ಚಿನ ಸ್ಥಳಾವಕಾಶವನ್ನು ನೀಡಲಾಗುತ್ತಿದೆ.

ಇದನ್ನೂ ಓದಿ: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ: ಇಂಜಿನಿಯರಿಂಗ್‌ನಲ್ಲಿ ತನಿಷಾ ಕಾರ್ತಿಕ್‌, ವೆಟರ್ನರಿಯಲ್ಲಿ ನಯನ ಗೋಪಿಗೆ ದೇಶದಲ್ಲೇ ನಂ.1 ರ‍್ಯಾಂಕ್!

ನೀಟ್ ಯುಜಿ ಮರು ಪರೀಕ್ಷೆಗೆ ಹಾಜರಾಗಲಿರುವ ಅಭ್ಯರ್ಥಿಗಳ ಪ್ರವೇಶ ಪತ್ರಗಳನ್ನು (Admit Card) ಜೂನ್ 14 ರಂದು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗುವುದು. ಪ್ರವೇಶ ಪತ್ರಗಳು ಪ್ರಕಟವಾದ ನಂತರ, ಅಭ್ಯರ್ಥಿಗಳು ಎನ್‌ಟಿಎ ಅಧಿಕೃತ ವೆಬ್‌ಸೈಟ್ ಆದ neet.nta.nic.in ಗೆ ಭೇಟಿ ನೀಡಿ ತಮ್ಮ ಹಾಲ್ ಟಿಕೆಟ್‌ಗಳನ್ನು ಪರಿಶೀಲಿಸಿ, ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.

ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು