ನೆಲ್ಯಾಡಿ: ಕಡಬ ತಾಲೂಕಿನ ನೆಲ್ಯಾಡಿ ಗ್ರಾಮದ ಬೈಲು ಎಂಬಲ್ಲಿ ₹60 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಸೇತುವೆ ಕಾಮಗಾರಿಗೆ ಶಾಸಕರು ಗುದ್ದಲಿಪೂಜೆ ನೆರವೇರಿಸಿದರು.
ಕೇಂದ್ರ ಸರ್ಕಾರದ NDRF ಹಾಗೂ ರಾಜ್ಯ ಸರ್ಕಾರದ SDRF ಅನುದಾನದಡಿ 60:40 ಅನುಪಾತದಲ್ಲಿ ಈ ಸೇತುವೆ ನಿರ್ಮಾಣಕ್ಕೆ ಅನುದಾನ ಒದಗಿಸಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಚುನಾವಣೆಯ ಸಂದರ್ಭದಲ್ಲಿ ಬೈಲು ಭಾಗದ ಜನರಿಗೆ ನೂತನ ಸೇತುವೆ ನಿರ್ಮಿಸಿಕೊಡುವ ಭರವಸೆ ನೀಡಿದ್ದೆ. ಮುಂದಿನ ಚುನಾವಣೆಗೂ ಮುನ್ನ ಸೇತುವೆ ನಿರ್ಮಾಣ ಕಾರ್ಯ ಪೂರ್ಣಗೊಳಿಸುವುದಾಗಿ ಭರವಸೆ ನೀಡಲಾಗಿತ್ತು. ಅದರಂತೆ ಇದೀಗ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಲಾಗಿದ್ದು, ಸ್ಥಳೀಯರ ಬಹುದಿನಗಳ ಬೇಡಿಕೆ ಈಡೇರುವ ಹಂತಕ್ಕೆ ಬಂದಿದೆ ಎಂದು ತಿಳಿಸಿದರು.

ಕಕ್ವೆಯಲ್ಲಿ ತಡೆಗೋಡೆಗೆ ಗುದ್ದಲಿಪೂಜೆ

ಆಲಂಕಾರು ಗ್ರಾಮದ ಕಕ್ವೆ ಎಂಬಲ್ಲಿ ನೂತನವಾಗಿ NDRF ಮತ್ತು SDRF ಅನುದಾನಲ್ಲಿ ನಿರ್ಮಾಣವಾಗಲಿರುವ ತಡೆ ಗೋಡೆಗೆ ಇಂದು ಶಾಸಕರು ಗುದ್ದಲಿಪೂಜೆ ನೆರವೇರಿಸಲಾಯಿತು.


