ಟಿ20 ಸರಣಿ, ಏಷ್ಯಾಕಪ್‌ಗೆ ಬಲಿಷ್ಠ ಭಾರತ ತಂಡ ಪ್ರಕಟ; ಶ್ರೇಯಸ್ ಅಯ್ಯರ್ ನೂತನ ನಾಯಕ, 15ರ ಹರೆಯದ ವೈಭವ್‌ಗೆ ಸ್ಥಾನ

ಮುಂಬೈ: ಮುಂಬರುವ ಐರ್ಲೆಂಡ್, ಇಂಗ್ಲೆಂಡ್ ಪ್ರವಾಸದ ಟಿ20 ಸರಣಿ ಹಾಗೂ 2026ರ ಏಷ್ಯಾಕಪ್ ಪಂದ್ಯಾವಳಿಗಳಿಗಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಬಲಿಷ್ಠ ಟೀಮ್ ಇಂಡಿಯಾವನ್ನು ಪ್ರಕಟಿಸಿದೆ. ಈ ಬಾರಿ ಆಯ್ಕೆ ಸಮಿತಿಯು ಹಲವು ಪ್ರಮುಖ ಮತ್ತು ಅಚ್ಚರಿಯ ಬದಲಾವಣೆಗಳನ್ನು ಮಾಡುವ ಮೂಲಕ ಭಾರತೀಯ ಕ್ರಿಕೆಟ್‌ನಲ್ಲಿ ಹೊಸ ಯುಗಕ್ಕೆ ಮುನ್ನುಡಿ ಬರೆದಿದೆ.

ತಂಡದ ನಾಯಕತ್ವದಲ್ಲಿ ಬಿಸಿಸಿಐ ಭಾರಿ ಬದಲಾವಣೆ ಮಾಡಿದ್ದು, ಸ್ಟಾರ್ ಬ್ಯಾಟರ್ ಶ್ರೇಯಸ್ ಅಯ್ಯರ್ ಅವರನ್ನು ಭಾರತ ಟಿ20 ಹಾಗೂ ಏಷ್ಯಾಕಪ್ ತಂಡದ ನೂತನ ನಾಯಕನನ್ನಾಗಿ ಅಧಿಕೃತವಾಗಿ ನೇಮಕ ಮಾಡಲಾಗಿದೆ. ಇನ್ನು ಯುವ ಆಟಗಾರ ತಿಲಕ್ ವರ್ಮಾ ಅವರಿಗೆ ಉಪನಾಯಕನ ಜವಾಬ್ದಾರಿ ನೀಡುವ ಮೂಲಕ ಭವಿಷ್ಯದ ದೃಷ್ಟಿಯಿಂದ ಯುವ ನಾಯಕತ್ವಕ್ಕೆ ಮಣೆ ಹಾಕಲಾಗಿದೆ.

15 ವರ್ಷದ ವೈಭವ್ ಸೂರ್ಯವಂಶಿಗೆ ಹಿರಿಯರ ತಂಡದಲ್ಲಿ ಚಾನ್ಸ್!:

ಐಪಿಎಲ್ 2026 ರಲ್ಲಿ ಸಿಡಿಲಬ್ಬರದ ಬ್ಯಾಟಿಂಗ್​ನೊಂದಿಗೆ ಇಡೀ ವಿಶ್ವದ ಗಮನ ಸೆಳೆದಿದ್ದ 15 ವರ್ಷದ ಯುವ ವಿಸ್ಮಯ ದಾಂಡಿಗ ವೈಭವ್ ಸೂರ್ಯವಂಶಿ ಅವರಿಗೆ ಭಾರತ ಹಿರಿಯರ ತಂಡಕ್ಕೆ ಮೊದಲ ಬಾರಿಗೆ ಬುಲಾವ್ ನೀಡಲಾಗಿದೆ. ಅವರೊಂದಿಗೆ ಯುವ ಆಟಗಾರರಾದ ಪ್ರಿನ್ಸ್ ಯಾದವ್, ನಿತೀಶ್ ಕುಮಾರ್ ರೆಡ್ಡಿ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಇಂಗ್ಲೆಂಡ್ ಮತ್ತು ಐರ್ಲೆಂಡ್ ಪ್ರವಾಸಕ್ಕೆ ಒಂದೇ ತಂಡವನ್ನು ಉಳಿಸಿಕೊಳ್ಳಲಾಗಿದ್ದು, ಏಷ್ಯಾಕಪ್ ತಂಡಕ್ಕೆ ಮಾತ್ರ ಮೊಹಮ್ಮದ್ ಸಿರಾಜ್ ಜಾಗದಲ್ಲಿ ಸ್ಟಾರ್ ವೇಗಿ ಜಸ್​ಪ್ರೀತ್ ಬುಮ್ರಾ ಕಂಬ್ಯಾಕ್ ಮಾಡಿದ್ದಾರೆ.

ಇದನ್ನೂ ಓದಿ;Vaibhav Suryavanshi: ಸ್ಫೋಟಕ ಅರ್ಧಶತಕ: ತನ್ನದೇ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ

ಟೀಮ್ ಇಂಡಿಯಾ ಸ್ಕ್ವಾಡ್ ವಿವರ :

ಐರ್ಲೆಂಡ್ ಮತ್ತು ಇಂಗ್ಲೆಂಡ್ ಟಿ20 ಸರಣಿಗೆ ಭಾರತ ತಂಡ:

ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪನಾಯಕ), ರವಿ ಬಿಷ್ಣೋಯ್, ಅಭಿಷೇಕ್ ಶರ್ಮಾ, ನಿತೀಶ್ ಕುಮಾರ್ ರೆಡ್ಡಿ, ಮೊಹಮ್ಮದ್ ಸಿರಾಜ್, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಶಿವಂ ದುಬೆ, ವರುಣ್ ಚಕ್ರವರ್ತಿ, ಪ್ರಿನ್ಸ್ ಯಾದವ್, ವೈಭವ್ ಸೂರ್ಯವಂಶಿ.

ಏಷ್ಯಾಕಪ್‌ಗೆ ಭಾರತ ತಂಡ:

ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪನಾಯಕ), ರವಿ ಬಿಷ್ಣೋಯ್, ಅಭಿಷೇಕ್ ಶರ್ಮಾ, ನಿತೀಶ್ ಕುಮಾರ್ ರೆಡ್ಡಿ, ಜಸ್​ಪ್ರೀತ್ ಬುಮ್ರಾ, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಶಿವಂ ದುಬೆ, ವರುಣ್ ಚಕ್ರವರ್ತಿ, ವೈಭವ್ ಸೂರ್ಯವಂಶಿ.

ಕ್ರಿಕೆಟ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು